ಬೆಂಗಳೂರು : ರಾಜ್ಯದ ಪರವಾಗಿ ಬಿಜೆಪಿ 25 ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಟ್ರಬಲ್ ಶೂಟರ್, ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ಸಿಗದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಹಾಯಕರಾಗಿದ್ದಾರೆ.

ಜಿಎಸ್ ಟಿ ಪಾಲು, ನೆರೆ ಪರಿಹಾರ ಮುಂತಾದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ನೆರವು ಸಿಗುತ್ತಿಲ್ಲ.
ರಾಜ್ಯದ 25 ಬಿಜೆಪಿ ಸಂಸದರು ಮೋದಿ ಎದುರು ಮಾತನಾಡುತ್ತಿಲ್ಲ. ಸಿಎಂಗೆ ಸಹಕಾರ ನೀಡದೆ ರಾಜ್ಯಕ್ಕೆ ದ್ರೋಹ ಬಗೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಧಾನಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಂದರ್ಭ ಯಾವುದೇ ಸಂಸದರು ಸಿಎಂಗೆ ಜೊತೆಯಾಗಿ ಬಂದಿಲ್ಲ.
ರಾಜ್ಯದ ಪರವಾಗಿ ಧ್ವನಿ ಎತ್ತುವ ಕಾರ್ಯವನ್ನು ಯಾವ ಸಂಸದರೂ ಮಾಡುತ್ತಿಲ್ಲ ಎಂದು ಡಿಕೆಶಿ ಬರೆದುಕೊಂಡಿದ್ದಾರೆ.








