ನವದೆಹಲಿ: ವಿಶ್ವವನ್ನೇ ಬೆಚ್ಚಿ ಬೀಸಿರುವ ಕೊರೊನಾ ವೈರಲ್ ಭಾರತಕ್ಕೂ ಕಾಲಿಟ್ಟಿದ್ದು, ದೇಶದ ಜನರು ಆತಂಕಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ದೇಶ್ ವಾಸಿಗಳಿಗೆ ಅಭಯ ನೀಡಿದ್ದು, ಕೊರೊನಾ ವೈರಸ್ ವಿರುದ್ಧ ಹೋರಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಭಯ ಪಡುವ ಅಗತ್ಯವಿಲ್ಲ. ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
“ಹೈ ಫೀವರ್ ಹೊಂದಿರುವ ಏಳು ಪ್ರಕರಣಗಳು ಆಗ್ರಾ ಮತ್ತು ಲಖನೌದಲ್ಲಿ ಪತ್ತೆಯಾಗಿವೆ ಮತ್ತು ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.









