ರಾಜಧರ್ಮದ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯಿಂದ ಕೇಂದ್ರ ಸರ್ಕಾರ ಪಾಠ ಕಲಿಯುವ ಅಗತ್ಯವಿಲ್ಲವೆಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಗುರುವಾರ ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸೋನಿಯಾ ಗಾಂಧಿ ಕೇಂದ್ರ ಸರಕಾರ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಧರ್ಮ ಪಾಲಿಸಬೇಕು ಎಂದು ಹೇಳಿದ್ದರು ಅಲ್ಲದೆ ರಾಷ್ಟ್ರಪತಿಗೆ ಮನವಿ ಪತ್ರವನ್ನು ಸಲ್ಲಿಸಿ ಗೃಹ ಸಚಿವ ಅಮಿತ್ ಶಾ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ‘ಶ್ರೀಮತಿ ಸೋನಿಯಾ ಗಾಂಧಿ ಅವರೇ, ನೀವು ನಮಗೆ ರಾಜಧರ್ಮದ ಬಗ್ಗೆ ಉಪದೇಶ ನೀಡಬೇಡಿ’ ಎಂದಿದ್ದಾರೆ.
ಬಿಜೆಪಿ ಮುಖಂಡ ಕಪಿಲ್ ಮಿಶ್ರಾ ಅವರ ದ್ವೇಷಪೂರಿತ ಭಾಷಣದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷ ಕಪಿಲ್ ಮಿಶ್ರಾ ಆಡಿದ ಮಾತುಗಳನ್ನು ಎಂದಿಗೂ ಮನ್ನಿಸುವುದಿಲ್ಲ. ನಮ್ಮ ಪಕ್ಷದ ಹಿರಿಯ ನಾಯಕರೇ ಮಿಶ್ರಾ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡನೆ ಮಾಡಿದ್ದಾರೆ” ಎಂದು ತಿಳಿಸಿದರು.
ಇರಾನ್‌ನ 45 ನಾವಿಕರ ಮೃತದೇಹ ಹಸ್ತಾಂತರ
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ 45 ನಾವಿಕರ ಮೃತದೇಹಗಳನ್ನು ಶ್ರೀಲಂಕಾ ಸರ್ಕಾರವು ಇರಾನ್ ರಾಯಭಾರ ಕಚೇರಿಗೆ ಹಸ್ತಾಂತರಿಸಿದೆ. ಈ ಘಟನೆ ಹಿಂದೂ...








