ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

Shwetha by Shwetha
August 7, 2026
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವ ಬಗ್ಗೆ ತಮಗೆ ಯಾವುದೇ ವೈಯಕ್ತಿಕ ಬೇಸರವಿಲ್ಲ ಮತ್ತು ತಮ್ಮನ್ನು ಸಮಾಧಾನಪಡಿಸುವ ಅಗತ್ಯವೂ ಇಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ವಂಚಿತರಾಗಿ ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಪಕ್ಷದ ವರಿಷ್ಠರು ಮಾತುಕತೆ ನಡೆಸಿ ಅವರ ಅಳಲನ್ನು ಆಲಿಸಬೇಕು ಎಂದು ನಾನೇ ಸಲಹೆ ನೀಡಿದ್ದೆ. ಅದರಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಬೆಂಗಳೂರಿಗೆ ಬಂದು ಅತೃಪ್ತ ಶಾಸಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ ಅವರು ಈ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.

Related posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

August 7, 2026
ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

August 7, 2026

ನನ್ನನ್ನು ಸಮಾಧಾನಪಡಿಸುವ ಅವಶ್ಯಕತೆಯಿಲ್ಲ. ಈಗಾಗಲೇ ಕೆಪಿಸಿಸಿ ಅಧ್ಯಕ್ಷರು ನನ್ನ ಮನೆಗೆ ಬಂದು ಮಾತುಕತೆ ನಡೆಸಿದ್ದಾರೆ. ಸುರ್ಜೇವಾಲಾ ಅವರು ನನ್ನನ್ನು ಪ್ರತ್ಯೇಕವಾಗಿ ಭೇಟಿ ಮಾಡಲೇಬೇಕು ಎಂಬ ನಿರೀಕ್ಷೆಯೂ ನನಗಿಲ್ಲ. ಸಚಿವ ಸ್ಥಾನ ಸಿಗದಿರುವುದು ಈಗ ಮುಗಿದ ಅಧ್ಯಾಯ. ಅದನ್ನು ಹೆಚ್ಚು ತಲೆಕೆಡಿಸಿಕೊಳ್ಳದೆ ಮುಂದಿನ ಕೆಲಸಗಳತ್ತ ಗಮನ ಹರಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಕ್ಷೇತ್ರವೇ ನನ್ನ ಮೊದಲ ಆದ್ಯತೆ ಎಂದ ಅವರು, ಜನರ ನಡುವೆ ಇದ್ದು ಕೆಲಸ ಮಾಡುತ್ತೇನೆ. ವಿಷಯಾಧಾರಿತ ಹೋರಾಟಗಳನ್ನು ಮುಂದುವರಿಸುವುದರ ಜೊತೆಗೆ, 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಗುರಿಯೊಂದಿಗೆ ಕೆಲಸ ಮಾಡುತ್ತೇನೆ ಎಂದು ತಮ್ಮ ಭವಿಷ್ಯದ ಯೋಜನೆಯನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಬಗ್ಗೆಯೂ ಅವರು ಮಾತನಾಡಿದರು. ಬಹಳ ವರ್ಷಗಳ ಬಳಿಕ ಬ್ರಾಹ್ಮಣ ಸಮುದಾಯಕ್ಕೆ ಸಂಪುಟದಲ್ಲಿ ಅವಕಾಶ ತಪ್ಪಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಸಮುದಾಯಕ್ಕೂ ಪ್ರಾತಿನಿಧ್ಯ ಮತ್ತು ಅವಕಾಶ ಕೇಳುವ ಹಕ್ಕಿದೆ. ಅದರಂತೆ ಬ್ರಾಹ್ಮಣ ಸಮುದಾಯ ತನ್ನ ಬೇಡಿಕೆಯನ್ನು ಮುಂದಿಟ್ಟಿರುವುದು ಸರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ShareTweetSendShare
Join us on:

Related Posts

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

ಭಾರತದಲ್ಲಿ ನನ್ನ ಖಾತೆ ನಿರ್ಬಂಧಿಸಿದ್ದು ಏಕೆ ಎಂದು ಪ್ರಶ್ನಿಸಿದ ಎಎಪಿ ನಾಯಕ- ಪ್ರಧಾನಿಗೆ ಅತಿಯಾಗಿ ತಲೆಬಾಗಬೇಡಿ ಮೆಟಾ ಸಂಸ್ಥೆಗೆ ಕೇಜ್ರಿವಾಲ್ ಖಡಕ್ ಎಚ್ಚರಿಕೆ

by Shwetha
August 7, 2026
0

ಹೊಸ ದೆಹಲಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಜಾಗತಿಕ ತಂತ್ರಜ್ಞಾನ ಸಂಸ್ಥೆ ಮೆಟಾ ವಿರುದ್ಧ ಗಂಭೀರ ಸಮರ ಸಾರಿದ್ದಾರೆ. ಭಾರತದಲ್ಲಿ ತಮ್ಮ...

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

ಪಿಒಪಿ ಗಣೇಶ ಮೂರ್ತಿಗಳಿಗೆ ಅವಕಾಶ ಇಲ್ಲ: ಸಚಿವ ಈಶ್ವರ ಖಂಡ್ರೆ ಸೂಚನೆ

by Shwetha
August 7, 2026
0

ಗಣೇಶೋತ್ಸವದ ವೇಳೆ ಪಿಒಪಿ (Plaster of Paris) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ಸ್ಥಾಪನೆ ಮತ್ತು ವಿಸರ್ಜನೆಗೆ ಅವಕಾಶ ನೀಡಬಾರದು ಎಂದು ಸಚಿವ ಈಶ್ವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram