ದಕ್ಷಿಣ ಕನ್ನಡ – ಜಿಲ್ಲೆಯಲ್ಲಿ ಹೊಸ ಬ್ಲಾಕ್ ಫಂಗಸ್ ಪ್ರಕರಣಗಳಿಲ್ಲ

1 min read

ದಕ್ಷಿಣ ಕನ್ನಡ – ಜಿಲ್ಲೆಯಲ್ಲಿ ಹೊಸ ಬ್ಲಾಕ್ ಫಂಗಸ್ ಪ್ರಕರಣಗಳಿಲ್ಲ

ಕೆಲವು ವಾರಗಳ ಹಿಂದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 57 ಬ್ಲಾಕ್ ಫಂಗಸ್ ಪ್ರಕರಣಗಳು ವರದಿಯಾಗಿದ್ದವು.‌ ಆದರೆ ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ಹೊಸ ಬ್ಲಾಕ್ ಫಂಗಸ್ ಪ್ರಕರಣಗಳು ದಾಖಲಾಗಿಲ್ಲ. ಇದರಿಂದಾಗಿ ಅಧಿಕಾರಿಗಳು ಮತ್ತು ಜನರಿಗೆ ಸ್ವಲ್ಪ ನಿರಾಳವಾಗಿದೆ.
Black fungus - how to identify its symptoms and how to take care them
ಜಿಲ್ಲಾ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಈವರೆಗೆ ಒಟ್ಟು 57 ಬ್ಲಾಕ್ ಫಂಗಸ್ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ. ಪ್ರಸ್ತುತ, ಆಸ್ಪತ್ರೆಗಳಲ್ಲಿ 50 ಸಕ್ರಿಯ ಪ್ರಕರಣಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೇವಲ 11 ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದವರಾಗಿದ್ದರೆ, ಉಳಿದ 39 ಮಂದಿ ಇತರ ಜಿಲ್ಲೆಯವರಾಗಿದ್ದು ಇಲ್ಲಿನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇಲ್ಲಿಯವರೆಗೆ ಏಳು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಇಬ್ಬರು ಜಿಲ್ಲೆಯವರು ಮತ್ತು ಐವರು ಇತರ ಜಿಲ್ಲೆಯವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿರುವುದರಿಂದ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚಿವೆ ಎಂಬ ಸಾಮಾನ್ಯ ಭಾವನೆ ಸರಿಯಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದ್ದಾರೆ. ಈ ಎರಡು ವಿಭಿನ್ನವಾಗಿವೆ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚು ಇದ್ದಾಗಲೂ ಬ್ಲಾಕ್ ಫಂಗಸ್ ಪ್ರಕರಣಗಳು ಕಡಿಮೆ ಇರಬಹುದು ಎಂದು ಅವರು ಹೇಳಿದ್ದಾರೆ. ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಬ್ಲಾಕ್ ಫಂಗಸ್ ಕಾಣಿಸಿಕೊಂಡಿದ್ದು, ಈ ವಿಷಯದ ಬಗ್ಗೆ ಭಯಪಡಬೇಡಿ ಎಂದು ಸಾರ್ವಜನಿಕರಿಗೆ ಅವರು ಮಾಹಿತಿ ನೀಡಿದರು.
wearing masks

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ಇದು ‌ಸಾಕ್ಷಾಟಿವಿ ಕಳಕಳಿ.

#blackfungus

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd