ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಹಗರಣ (Scam) ನಡೆದಿದೆ ಎಂದು ಯಾರೂ ತಲೆ ತಗ್ಗಿಸಬೇಕಾಗಿಲ್ಲ. ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ.
ಅಧಿಕಾರಿಗಳ ತಪ್ಪಿನಿಂದಾಗಿಲೇ ಈ ಹಗರಣ ನಡೆದಿದ್ದು, ನಮ್ಮ ಶಾಸಕರ ತಪ್ಪು ಇದರಲ್ಲಿ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರಿಗೆ ಈ ಮೂಲಕ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ.
ಅಧಿಕಾರಿಗಳು ಹಗರಣದಲ್ಲಿ ಭಾಗಿಯಾಗಿದ್ದಾರೆ. ಹಗರಣದಲ್ಲಿ ನಮ್ಮ ಶಾಸಕರ ಪಾತ್ರ ಇಲ್ಲ. ನನ್ನ ಬಳಿ ಆಣೆ ಪ್ರಮಾಣ ಮಾಡಿ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಸುಮ್ಮನೆ ಬಿಡುವುದಿಲ್ಲ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ತೇವೆ. ಹಗರಣ ಆಗಿದೆ ಅಂತ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಕಚೇರಿಗಳಿರಬೇಕು. ಸ್ವಂತ ಕಟ್ಟಡಗಳಿರುವಂತೆ ನೋಡಿಕೊಳ್ಳಬೇಕು. ಬ್ಲಾಕ್ ಮಟ್ಟದಲ್ಲೂ ಕಚೇರಿಗಳಿರಬೇಕು. ಬಾಡಿಗೆ ಕಟ್ಟಡಗಳಲ್ಲಾದ್ರೂ ಕಚೇರಿ ಮಾಡಬೇಕು. ಬಗರ್ ಹುಕುಂ ಸಮಿತಿಗಳಲ್ಲಿ ಕಾರ್ತಕರ್ತರಿಗೆ ಅವಕಾಶ ನೀಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.








