ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳು ಅಲ್ಲ : ರೇಣುಕಾಚಾರ್ಯ
ಬೆಂಗಳೂರು : ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳು ಅಲ್ಲ, ನಾನು ಸಿಎಂ ಭೇಟಿ ವೇಳೆ ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಭೇಟಿ ಬಗ್ಗೆ ಮಾತನಾಡಿದ ರೇಣುಕಾಚಾರ್ಯ, ನಿನ್ನೆ ಸಿಎಂ ಮನೆಗೆ ಹೋಗಿದ್ವಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಿಎಂ ಜತೆ ಚರ್ಚೆ ಮಾಡಿದ್ದೇವೆ.
ಅದು ಬಿಟ್ಟು ಬೇರೆ ಏನೂ ಮಾತಾಡಿಲ್ಲ, ಇವತ್ತು ಸಿಎಂ ಮತ್ತೆ ಎಲ್ಲರನ್ನೂ ಊಟಕ್ಕೆ ಕರೆದಿದ್ದಾರೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳು ಅಲ್ಲ ಎಂದಿದ್ದಾರೆ.
ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಯತ್ನಾಳ್ ಅವರ ಜತೆ ನಾವೆಲ್ಲ ಮಾತಾಡುತ್ತೇವೆ.
ಅವರು ಹಾಗೆಲ್ಲ ಮಾತಾಡಬಾರದು. ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಮಾಡಿದ್ದು, ಹೈಕಮಾಂಡ್ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel