ರಾಯಚೂರು: ವಿದ್ಯಾರ್ಥಿಯೊಬ್ಬಾತ ಡೆತ್ ನೋಟ್ (Death Note) ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ವಿದ್ಯಾರ್ಥಿ (Student) ಧಾರವಾಡದಲ್ಲಿ ಬಿಎ ಓದುತ್ತಿದ್ದ. ಆದರೆ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರದಲ್ಲಿ (Sirwar) ನಡೆದಿದೆ..
ವೆಂಕಟೇಶ್ ನಾಯಕ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಧಾರವಾಡದಲ್ಲಿ ಬಿಎ ಓದುತ್ತಿದ್ದ. ಆದರೆ, ಇತ್ತೀಚಿಗಷ್ಟೇ ಊರಿಗೆ ಬಂದಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಸಾವಿಗೆ ಯಾರೂ ಜವಾಬ್ದಾರರಲ್ಲ, ಹೊಣೆಗಾರರಲ್ಲ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.