ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರು ನಿನ್ನೆ ಅಧಿಕಾರ ಸ್ವೀಕರಿಸಿದ್ದಾರೆ. ಈ ಬಗ್ಗೆ ಇಂದು ಮಂಗಳೂರಿನಲ್ಲಿ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದು, ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹವೇ ಬೇರೆ… ರಾಜಕಾರಣವೇ ಬೇರೆ ಎಂದು ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವುದರಿಂದ ನಮ್ಮ ಬಿಜೆಪಿಗೇನೂ ಸಮಸ್ಯೆ ಇಲ್ಲ. ಡಿ.ಕೆ.ಶಿವಕುಮಾರ್ ಅವರ ಜೊತೆಗಿನ ಸ್ನೇಹವೇ ಬೇರೆ ರಾಜಕಾರಣ ಬೇರೆ. ಬಿಜೆಪಿ ಸಂಘಟನೆಯೇ ಬೇರೆ. ನಮ್ಮ ಪಕ್ಷದ ಸಂಘಟನೆ ತುಂಬಾ ಚೆನ್ನಾಗಿ ಇದೆ. ಇಲ್ಲಿ ವ್ಯವಸ್ಥಿತವಾಗಿ ಸಂಘಟನೆ ಇದ್ದು, ಕಾಂಗ್ರೆಸ್ ನಲ್ಲಿ ಸಂಘಟನಾ ಕೌಶಲ್ಯ ಇಲ್ಲ. ಹಾಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸಂಘಟನೆ ಮಧ್ಯೆ ಅಜಗಜಾಂತರ ವ್ಯತ್ಯಾಸ ಇದೆ ಎಂದು ಸೋಮಶೇಖರ್ ಹೇಳಿದ್ದಾರೆ.







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
