ದೆಹಲಿಯ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ : ಅರವಿಂದ ಬೆಲ್ಲದ್

1 min read
arvind-bellad saaksha tv

ದೆಹಲಿಯ ಭೇಟಿಯ ಹಿಂದೆ ರಾಜಕೀಯ ಉದ್ದೇಶ ಇಲ್ಲ : ಅರವಿಂದ ಬೆಲ್ಲದ್

ಬೆಂಗಳೂರು : ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಿಸಿ ಬಿಸಿ ಚರ್ಚೆಗಳ ಮಧ್ಯೆ ಶುಕ್ರವಾರಿ ತಡರಾತ್ರಿ ಅರವಿಂದ ಬೆಲ್ಲದ್ ಅವರು ದೆಹಲಿಗೆ ಭೇಟಿ ನೀಡಿದ್ದರು. ಇದು ಸಾಮಾನ್ಯವಾಗಿಯೇ ರಾಜ್ಯದಲ್ಲಿ ಒಂದಿಷ್ಟು ಕುತೂಹಲಕ್ಕೆ ಕಾರಣವಾಗಿತ್ತು.

ಈ ಸಂಬಂಧ ಇದೀಗ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅರವಿಂದ ಬೆಲ್ಲದ್, ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ.

Arvind Bellad

ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ.

ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd