ರಮೇಶ್ ಜಾರಕಿಹೊಳಿ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ : ಆರ್.ಅಶೋಕ್
ಹಾಸನ : ರಮೇಶ್ ಜಾರಕಿಹೊಳಿ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಯಲ್ಲಿಯೇ ಇರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ನಮ್ಮ ಬಿಜೆಪಿ ಸರ್ಕಾರ ಬರಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಮಹತ್ವದ್ದಾಗಿದೆ.
ಅವರ ತ್ಯಾಗದಿಂದಲೇ ಸರ್ಕಾರ ರಚನೆಯಾಗಿದೆ. ಹೀಗಿರುವಾಗ ರಾಜೀನಾಮೆ ಕೊಡುವ ಪ್ರಶ್ನೆ ಬರಲ್ಲ. ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿಯೇ ಇರಲಿದ್ದಾರೆ ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಸಾಹುಕಾರ್ ಪರ ಬ್ಯಾಟ್ ಬೀಸಿದರು.
ಇನ್ನು ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ನೀಡುವ ವಿಚಾರವಾಗಿ ಮಾತನಾಡಿ, ಈ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.