ಬೆಂಗಳೂರು : ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬರುವವರೆಗೂ ರಾಜ್ಯದಲ್ಲಿ ಕಾಲೇಜುಗಳು ತೆರೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶಾಲಾ-ಕಾಲೇಜು ತೆರೆಯುವ ಸಂಬಂಧ ಇದುವರೆಗೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ಎಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸೋದಿಲ್ಲವೋ, ಅಲ್ಲಿಯವರೆಗೂ ನಾವು ಶಾಲಾ-ಕಾಲೇಜು ತೆರೆಯುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
ಕೇಂದ್ರ ಸರ್ಕಾರ ಶಾಲಾ-ಕಾಲೇಜು ತೆರೆಯುವ ಸಂಬಂಧ ಮಾರ್ಗಸೂಚಿ ಹೊರಡಿಸಿದ ನಂತ್ರವೇ ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ. ಹೀಗಾಗಿ ಸೆಪ್ಟೆಂಬರ್ ನಲ್ಲಿ ಶಾಲೆ ತೆರೆಯೋದಾಗಲಿ, ಅಕ್ಟೋಬರ್ ನಲ್ಲಿ ತೆರೆಯೋ ಬಗ್ಗೆಯಾಗಲೀ ಇಲಾಖೆಯಿಂದ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂಬುದಾಗಿ ತಿಳಿಸಿದರು.









