ಬೆಂಗಳೂರು: ಕೊರೊನಾ ಹೆಚ್ಚಳ ಸಾಧ್ಯತೆ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳು ಹಾಗೂ ಪಿಯುಸಿ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಶಾಲೆಗಳನ್ನು ಪುನಾರಂಭ ವಿಚಾರವಾಗಿ ಅನ್ಬುಕುಮಾರ್ ವರದಿಯ ಸಾಧಕ-ಬಾಧಕಗಳ ಬಗ್ಗೆ ಶಿಕ್ಷಣ, ಆರೋಗ್ಯ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಡಿಸೆಂಬರ್ ಅಂತ್ಯದವರೆಗೆ 1ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲೆ-ಕಾಲೇಜುಗಳನ್ನು ಆರಂಭಿಸುವುದಿಲ್ಲ. ಡಿಸೆಂಬರ್ ಅಂತ್ಯದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲು ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಬಿಎಸ್ವೈ ಹೇಳಿದರು.
ಸದ್ಯ ಚಳಿಗಾಲವಾಗಿದ್ದರಿಂದ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗಬಹುದು. ಈಗ ಆರಂಭವಾಗಿರುವ ಪದವಿ ಮುಂದುವರೆಸಲು ತೀರ್ಮಾನಿಸಲು ತೀರ್ಮಾನಿಸಲಾಗಿದೆ. ಪದವಿ, ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಿಗೂ ಶೇ.5ರಷ್ಟು ವಿದ್ಯಾರ್ಥಿಗಳು ಬರುತ್ತಿಲ್ಲ. ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದು ಬೇಡ ಎಂದು ತಜ್ಞರು ಅಭಿಪ್ರಾಯ ನೀಡಿದ ಹಿನ್ನೆಲೆಯಲ್ಲಿ ಡಿಸೆಂಬರ್ 31ರವರೆಗೆ ಶಾಲೆ-ಪಿಯು ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಈ ವರ್ಷ ಝೀರೋ ಇಯರ್ ಇಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ
ಡಿಸೆಂಬರ್ ಅಂತ್ಯದವರೆಗೂ 1ನೇ ತರಗತಿಯಿಂದ 12ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸದೇ ಇದ್ದರೂ ಝೀರೋ ಇಯರ್ ಎಂದರು ಘೋಷಣೆ ಮಾಡುವ ಪ್ರಶ್ನೆಯೇ ಇಲ್ಲ. ಝೀರೋ ಇಯರ್ ಎಂಬುದು ನಮ್ಮ ತಲೆಯಲ್ಲಿಯೇ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಿಲ್ಲ. ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ಸದ್ಯದಲ್ಲೇ ದಿನಾಂಕ ಪ್ರಕಟಿಸಲಾಗುವುದು. ಈಗಾಗಲೇ ಚಂದನಾ ಟಿವಿ, ಆನ್ಲೈನ್ ಮೂಲಕ ಮೂಲಕ ತರಗತಿಗಳನ್ನು ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಸಂವೇದನಾ ತರಗತಿಗಳು ಮುಕ್ತಾಯವಾಗಲಿವೆ. ಹೀಗಾಗಿ ಸದ್ಯದಲ್ಲೇ ಅಧಿಕಾರಿಗಳ ಸಭೆ ನಡೆಸಿ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ತಿಳಿಸುತ್ತೇವೆ ಎಂದರು.
ತಜ್ಞರ ಸಮಿತಿ ಶಿಫಾರಸು ಒಪ್ಪಿದ ಸರ್ಕಾರ
ಕೋವಿಡ್ ಸೋಂಕು ಹರಡುವುದು ನಿಯಂತ್ರಣಕ್ಕೆ ಬಾರದಿರುವುದು ಹಾಗೂ ಚಳಿಗಾಲವಾದ್ದರಿಂದ ಕೊರೊನಾ 2ನೇ ಅಲೆ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೆ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ನೀಡಿದ ಶಿಫಾರಸನ್ನು ರಾಜ್ಯ ಸರ್ಕಾರ ಒಪ್ಪಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಿತಿ ಮಾಡಿದ ಶಿಫಾರಸು ಸರಿಯಾಗಿದೆ. ಸಮಿತಿ ಶಿಫಾರಸಿನಂತೆ ಡಿಸೆಂಬರ್ ಅಂತ್ಯದವರೆಗೆ ಶಾಲೆ ತೆರೆಯುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel