ವಿಶೇಷ ಪ್ಯಾಕೇಜ್ ಘೋಷಣೆ ಮಾಡೋ ಚಿಂತನೆ ಇಲ್ಲ : ಬಿಎಸ್ ವೈ BSY
ಬೆಂಗಳೂರು : ಕಳೆದ ಬಾರಿ ಲಾಕ್ ಡೌನ್ ವೇಳೆ ಘೋಷಿಸಿದಂತೆ ಈ ಬಾರಿ ಯಾವುದೇ ರೀತಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲು ಚಿಂತನೆ ನಡೆಸಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಮ್ಮ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ.
ಆದ್ರೆ ನಮ್ಮಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗಿವೆ. ಹಾಗಾಗಿ ಜನರು ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ ಕೇಂದ್ರದ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ಭೇಟಿ ಕೊಡ್ತೀರಾ ಎಂಬ ಪ್ರಶ್ನೆಗೆ ಗರಂ ಆದ ಸಿಎಂ, ನಾನ್ಯಾಕೆ ದೆಹಲಿಗೆ ಹೋಗಲಿ, ಮೊನ್ನೆ ಬಸವರಾಜ್ ಬೊಮ್ಮಾಯಿ ಹೋಗಿ ಬಂದಿದ್ದಾರೆ.
ರಾಜ್ಯಕ್ಕೆ ಬೇಕಾದ ಸಹಕಾರ ಕೇಳಿ ಬಂದಿದ್ದಾರೆ.ನಾನು ಕೇಂದ್ರ ನಾಯಕರ ಜತೆ ಸಂಪರ್ಕದಲ್ಲಿದ್ದೇನೆ.
ಸ್ವತಃ ಪ್ರಧಾನಿಯವರ ಜೊತೆ ಮಾತನಾಡಿದ್ದೇನೆ. ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ದೆಹಲಿಗೆ ಹೋಗುವ ಅವಶ್ಯಕತೆಯಿಲ್ಲ ಎಂದು ಹೇಳಿದರು.










