ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ.
ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ಕೈತಪ್ಪಿದ್ದು, ಚನ್ನಬಸಪ್ಪಗೆ ಮಣೆ ಹಾಕಲಾಗಿದೆ. ಬಿ.ವಿ.ನಾಯಕ್ ಅವರು ನಿನ್ನೆಯಷ್ಟೇ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ನಾಯಕ್ಗೆ ಟಿಕೆಟ್ ಕೊಡಿಸುವಲ್ಲಿ ಸಚಿವ ಶ್ರೀರಾಮುಲು ಯಶಸ್ವಿಯಾಗಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬರೋಬ್ಬರಿ 73 ಜನ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. 20 ಕುಟುಂಬಗಳ ಸದಸ್ಯರಿಗೆ ಸ್ಪರ್ಧೆಗೆ ಅವಕಾಶ ಕಲ್ಪಿಸುವ ಮೂಲಕ ಕುಟುಂಬ ರಾಜಕಾರಣಕ್ಕೂ ಸೈ ಎಂದಿದೆ. 12 ಜನ ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಿದೆ.