MES ಪುಂಡರ ವಿರುದ್ಧ ದೇಶದ್ರೋಹ ಕೇಸ್ ಇಲ್ಲ
ಡಿ. 17ರ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಟ್ವಿಸ್ಟ್
ದೇಶದ್ರೋಹದ ಕೇಸ್ ಕೈಬಿಡಲು ಮುಂದಾದ ಸರ್ಕಾರ
ರಾಜಕಾರಣಿಗಳ ಒತ್ತಡಕ್ಕೆ ತಲೆಬಾಗಿತಾ ಖಾಕಿ ಪಡೆ..?
ಸರ್ಕಾರದ ನಡೆಗೆ ಕನ್ನಡ ಸಂಘಟನೆಗಳ ಆಕ್ರೋಶ
ಬೆಂಗಳೂರು : ಡಿಸೆಂಬರ್ 17 ರಂದು ಬೆಳಗಾವಿಯಲ್ಲಿ ಎಂಇಎಸ್ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿ, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು.
ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ಕೈಬಿಡಲು ಸರ್ಕಾರ ಮುಂದಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸುವುದಾಗಿ ಗುಡುಗಿದ್ದರು.
ಆದ್ರೆ ಇದೀಗ ಎಂಇಎಸ್‍ನ ಪುಂಡರ ವಿರುದ್ಧ ಪೊಲೀಸರು ದೇಶದ್ರೋಹದ ಪ್ರಕರಣಗಳನ್ನು ಕೈಬಿಟ್ಟು ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತ ಚಾರ್ಜ್‍ಶೀಟ್‍ನಲ್ಲಿ 124(ಎ) ಸೆಕ್ಷನ್ ಕೈಬಿಟ್ಟಿದ್ದೇಕೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ.
ಅಲ್ಲದೇ ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಕರವೇ ನಾರಾಯಣಗೌಡ ಎಚ್ಚರಿಸಿದ್ದಾರೆ. No Treason case against MES activists









