ಮಂಗಳೂರು, ಮೇ 16 : ಕೊರೊನಾ ಸೋಂಕಿನಿಂದಾಗಿ ದಕ್ಷಿಣ ಕನ್ನಡದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಜಿಲ್ಲಾಡಳಿತ ಮತ್ತು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಂಗಳೂರಿನಲ್ಲಿ ಕೊರೋನಾ ಸೋಂಕು ದೃಢಪಟ್ಟ ಮೂರು ದಿನದಲ್ಲಿ ಸಾಯುತ್ತಿದ್ದಾರೆ. ಜನರ ಜೀವಕ್ಕೆ ಇಲ್ಲಿ ಬೆಲೆ ಇಲ್ವಾ? ಜಿಲ್ಲಾಡಳಿತ ಇದನ್ನು ತಮಾಷೆಯಾಗಿ ತೆಗೆದುಕೊಳ್ಳಬಾರದು. ಜನರು ಸಾವನ್ನಪ್ಪಲು ಕಾರಣ ಏನು? ಎಂದು ಶಾಸಕ ಯು.ಟಿ. ಖಾದರ್ ಪ್ರಶ್ನಿಸಿದ್ದಾರೆ.
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶಾಸಕ ಯು.ಟಿ. ಖಾದರ್ ಆರೋಗ್ಯ ಇಲಾಖೆ ಇದನ್ನು ತನಿಖೆ ಮಾಡಲಿ. ಒಬ್ಬ ಸೋಂಕಿತ ಸತ್ತರೆ 150 ಜನರಿಗೆ ಕೊರೊನಾ ಸೋಂಕು ತಗಲುತ್ತದೆ ಎಂದು ವೈದ್ಯಕೀಯ ಅಧ್ಯಯನದಿಂದ ಧೃಡಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಕೊರೊನಾ ಮೂಲವನ್ನೇ ಪತ್ತೆ ಹಚ್ಚಲು ಆಗಿಲ್ಲ. ಯಾವುದೇ ವಿಚಾರದಲ್ಲೂ ಜಿಲ್ಲಾಡಳಿತಕ್ಕೆ ಸ್ಪಷ್ಟತೆ ಇಲ್ಲ. ಜನರಿಗೆ ಕಿಟ್ ಕೊಟ್ಟ ಮಾತ್ರಕ್ಕೆ ವೈರಸ್ ಹೋಗುವುದಿಲ್ಲ. ಕೊರೋನಾ ಸೋಂಕಿನ ವೈರಸ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ದ.ಕ ಜಿಲ್ಲಾಡಳಿತದ ವಿರುದ್ಧ ಶಾಸಕ ಯು.ಟಿ ಖಾದರ್ ಆರೋಪ ಮಾಡಿದರು.
fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








