ಸಾರಿಗೆ ನೌಕರರ ಸತ್ಯಾಗ್ರಹ; ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ
ಸಾರಿಗೆ ನೌಕರರನ್ನು ಸರ್ಕಾರದ ನೌಕರರನ್ನಾಗಿ ಮಾಡುವಂತೆ ಒತ್ತಾಯ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರದ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಬಿಎಂಟಿಸಿ, ಕೆಎಸ್ ಆರ್‌ಟಿಸಿ, ವಾಯುವ್ಯ ಕರ್ನಾಟಕ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದರಲ್ಲಿ ಸಾವಿರಾರು ನೌಕರರು ಭಾಗಿಯಾಗಿದ್ದು, ಸ್ಥಳಕ್ಕೆ ರಾಜಕಾರಣಿಗಳು ಸೇರಿ ಹಲವರು ಭೇಟಿ ನೀಡಿ ನೌಕರರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಸುಮಾರು 10 ಸಾವಿರಕ್ಕೂ ಹೆಚ್ಚು ನೌಕರರು ಈ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯ ಆಗುತ್ತದೆ ಎಂದು ಹೇಳಲಾಗಿತ್ತು. ಆದ್ರೆ ಸದ್ಯ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ. ಕೊಪ್ಪಳ, ವಿಜಯಪುರ, ಬಾಗಲಕೋಟೆ, ಚಿಕ್ಕಮಗಳೂರು, ಉಡುಪಿ, ಬೀದರ್, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಎಸ್‌ಆರ್ ಟಿಸಿ ಬಸ್‌ಗಳು ಎಂದಿನಂತೆ ಸಂಚಾರ ಆರಂಭಿಸಿವೆ. ಇನ್ನು ಬೆಂಗಳೂರಿನಿಂದ ಹೊರಡುವ ಬಸ್ ಗಳ ಸಂಚಾರದಲ್ಲೂ ಸಹ ಯಾವುದೇ ತೊಂದರೆ ಆಗಿಲ್ಲ.