ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ | ಸಚಿವ ಸ್ಥಾನ ಆಕಾಂಕ್ಷಿಗಳಿಗೆ ನಿರಾಸೆ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸೇರಲು ಕಸರತ್ತು ನಡೆಸುತ್ತಿರುವ ಸಚಿವಾಕಾಂಕ್ಷಿಗಳಿಗೆ ನಿರಾಸೆ ಎದುರಾಗಿದೆ.
ಸದ್ಯಕ್ಕೆ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.
ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿದ್ದು, ಬೊಮ್ಮಾಯಿ ಸರ್ಕಾರದಲ್ಲಿ ಕೈಬಿಡಲಾಗಿರುವ ಮಾಜಿ ಸಚಿವರು ಸಂಪುಟ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ.
ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಮಾಜಿ ಸಚಿವರು ನಿರೀಕ್ಷೆ ಮಾಡಿದ್ದರು.
ಆದ್ರೆ ಅತ್ತ ಪಕ್ಷದ ಹೈಕಮಾಂಡ್ ಆಗಲಿ.. ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಾಗಲಿ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಕಾರಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಎಂದು ಹೇಳಲಾಗುತ್ತಿದೆ. ಯಾಕೆಂದರೇ ಮುಂಬರುವ ಸ್ಥಳೀಯ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಸ್ಥಾನ ದೊರಕಿಸಿಕೊಡುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ.
ಹೀಗಾಗಿ ಬಿಜೆಪಿ ರಣ ತಂತ್ರ ರೂಪಿಸುತ್ತಿದೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸೂಕ್ತವಲ್ಲ ಎಂದು ಬಿಜೆಪಿಯ ಬಿಗ್ ಬಾಸ್ ಗಳು ಭಾವಿಸಿದ್ದಾರೆ ಎಂದು ಹೇಳಲಾಗುತ್ತಿದೆ.