ADVERTISEMENT
Sunday, June 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶಾದ್ಯಂತ ಜೂನ್ 1ರಿಂದ ನಾನ್ ಎಸಿ ರೈಲು ಸಂಚಾರ

admin by admin
May 20, 2020
in International, Newsbeat, ದೇಶ - ವಿದೇಶ
suicide
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ 20 : ಕೇಂದ್ರ ಸರ್ಕಾರ ಜೂನ್ 1ರಿಂದ ನಾನ್ ಎಸಿ ರೈಲು ಸಂಚಾರ ನಡೆಸಲು ನಿರ್ಧರಿಸಿದ್ದು, ರೈಲ್ವೇ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದೆ.‌ ದೇಶಾದ್ಯಂತ‌ ಜೂನ್ 1ರಿಂದ 200 ನಾನ್ ಎಸಿ ರೈಲುಗಳು ಸಂಚಾರ ಪ್ರಾರಂಭಿಸಲಿದ್ದು, ನಿಗದಿತ ವೇಳಾಪಟ್ಟಿಯಂತೆ ರೈಲುಗಳ ಓಡಾಟ ನಡೆಯಲಿದೆ. ಶೀಘ್ರದಲ್ಲಿ ಆನ್‌ಲೈನ್ ಬುಕಿಂಗ್ ತೆರೆಯಲ್ಪಡುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಲಾಕ್ ಡೌನ್ ಪರಿಣಾಮದಿಂದ ದೇಶದಾದ್ಯಂತ ಸಿಲುಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರಿಗಾಗಿ 200 ಶ್ರಮಿಕ್ ರೈಲುಗಳನ್ನು ಓಡಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗುವುದು ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ‌

Related posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

June 28, 2026
ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

June 28, 2026

ಮುಂದಿನ ಎರಡು ದಿನಗಳಲ್ಲಿ ಭಾರತೀಯ ರೈಲ್ವೆ, ಶ್ರಮಿಕ್ ವಿಶೇಷ ರೈಲುಗಳ ಸಂಖ್ಯೆಯನ್ನು ದಿನಕ್ಕೆ 400 ಕ್ಕೆ ಹೆಚ್ಚಿಸಲಾಗುತ್ತದೆ. ಎಲ್ಲಾ ವಲಸಿಗರು ತಾವು ಇರುವ ಸ್ಥಳದಲ್ಲಿಯೇ ಇರಬೇಕೆಂದು ಕೋರಲಾಗಿದ್ದು, ಭಾರತೀಯ ರೈಲ್ವೆ ಮುಂದಿನ ಕೆಲವು ದಿನಗಳಲ್ಲಿ ಅವರನ್ನು ಮನೆಗೆ ಕಳುಹಿಸಲಿದೆ ಎಂದು ಸಚಿವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ದೇಶದಲ್ಲಿ ಶ್ರಮಿಕ್ ರೈಲುಗಳು ಮಾತ್ರ ಓಡಾಡುತ್ತಿದ್ದು, ಮೇ 1 ರಿಂದ ಇಲ್ಲಿಯ ತನಕ ಸುಮಾರು 1600 ಶ್ರಮಿಕ ವಿಶೇಷ ರೈಲುಗಳು ಸಂಚರಿಸಿದ್ದು, 21.5 ಲಕ್ಷ ಕಾರ್ಮಿಕರನ್ನು ಬೇರೆ ಊರುಗಳಿಂದ ಅವರವರ ಊರಿಗೆ ತಲುಪಿಸಿದೆ. ಉತ್ತರ ಪ್ರದೇಶದಲ್ಲಿ 837 ರೈಲು, ಬಿಹಾರದಲ್ಲಿ 428 ರೈಲು ಮತ್ತು ಮಧ್ಯಪ್ರದೇಶದಲ್ಲಿ 100 ವಿಶೇಷ ರೈಲುಗಳು ಸಂಚರಿಸಿದೆ.

ಆದರೆ ಶ್ರಮಿಕ್ ರೈಲು ಮತ್ತು ವಿಶೇಷ ರೈಲುಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಪ್ರಯಾಣಿಕರ ರೈಲು ಸಂಚಾರ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಂಚಾರ ಪ್ರಾರಂಭಿಸಿಲ್ಲ.

ಭಾರತೀಯ ರೈಲ್ವೇ ಹೊರಡಿಸಿರುವ ಹೊಸ ಆದೇಶದ ಪ್ರಕಾರ ವಲಸೆ ಕಾರ್ಮಿಕರನ್ನು ವಾಪಸು ಕಳುಹಿಸಲು ಶ್ರಮಿಕ ವಿಶೇಷ ರೈಲುಗಳಿಗೆ ರಾಜ್ಯಗಳ ಅನುಮತಿ ಬೇಕಿಲ್ಲ. ಒಂದು ರಾಜ್ಯ ಕಾರ್ಮಿಕರನ್ನು ವಾಪಸ್ ಕಳಿಸಲು ಪಟ್ಟಿ ನೀಡಿದರೆ ಸಾಕು, ಪಟ್ಟಿ ಕೊಟ್ಟ ರಾಜ್ಯದಿಂದ ರೈಲನ್ನು ಓಡಿಸಲಾಗುತ್ತದೆ ಎಂದು ಭಾರತೀಯ ರೈಲ್ವೇ ಇಲಾಖೆ ಸ್ಪಷ್ಟಪಡಿಸಿದೆ.‌

ಕೇಂದ್ರ ಗೃಹ ಸಚಿವಾಲಯವು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಜೊತೆಗಿನ ಸಂಘರ್ಷದ ಬಳಿಕ, ಶ್ರಮಿಕ್‌ ರೈಲುಗಳ ಸಂಚಾರದ ಕುರಿತು ರೈಲ್ವೆ ಸಚಿವಾಲಯವು ಗೃಹ ಸಚಿವಾಲಯದ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಬಹುದು ಎಂದು ತಿಳಿಸಿದೆ. ಶ್ರಮಿಕ್‌ ರೈಲುಗಳ ಓಡಾಟಕ್ಕೆ ಸಂಬಂಧಿಸಿ ರಾಜ್ಯ ಸರಕಾರಗಳು ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಬೇಕು. ಅಲ್ಲದೇ ರಾಜ್ಯ ಸರ್ಕಾರಗಳು ನಿಗದಿತ ರೈಲು ವೇಳಾಪಟ್ಟಿಗೆ ಸರಿಯಾಗಿ ರೈಲು ನಿಲ್ದಾಣ ತಲುಪಲು ಕಾರ್ಮಿಕರಿಗೆ ಬಸ್‌ ವ್ಯವಸ್ಥೆಯನ್ನು ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಿದ್ದಾರೆ. ರೈಲ್ವೆ ಪ್ರಯಾಣಿಕರ ವಿಶ್ರಾಂತಿ ‌ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯವಿರುವಂತೆ ಮತ್ತು ಆಹಾರ, ನೀರು ಪೂರೈಕೆಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಸುರಕ್ಷತೆಗೆ ಅಗತ್ಯವಾದ ಸುರಕ್ಷಾ ಕ್ರಮಗಳನ್ನು ‌ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲಾಗದೆ ಪ್ರಮುಖ ನಗರಗಳಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಅಂತಹ ಲಕ್ಷಾಂತರ ವಲಸೆ ಕಾರ್ಮಿಕರನ್ನು, ವಿದ್ಯಾರ್ಥಿಗಳನ್ನು ಅವರವರ ಊರಿಗೆ ವಾಪಸು ಕಳುಹಿಸಲು ಭಾರತೀಯ ರೈಲ್ವೆ ಇಲಾಖೆ ಶ್ರಮಿಕ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ರಾಜ್ಯದಲ್ಲಿರುವ ವಲಸೆ ಕಾರ್ಮಿಕರನ್ನು ಅವರ ಊರಿಗೆ ಶ್ರಮಿಕ್​​ ರೈಲಿನ ಮೂಲಕ ಕಳಿಸುವ ವ್ಯವಸ್ಥೆ ಮಾಡುತ್ತಿದೆ.

Tags: central government
ShareTweetSendShare
Join us on:

Related Posts

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

ಆರ್‌ಎಸ್‌ಎಸ್‌ ವಿರುದ್ಧದ ಅವಹೇಳನಕಾರಿ ಹೇಳಿಕೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್‌ಗೆ ಕೋರ್ಟ್‌ನಿಂದ ಸಮನ್ಸ್ ಜಾರಿ

by Shwetha
June 28, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಸಂಘಟನೆಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಯೂತ್ ಕಾಂಗ್ರೆಸ್...

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

ಕೇಂದ್ರದ ವಿದೇಶಾಂಗ ನೀತಿಯಿಂದ ಭಾರತಕ್ಕೆ ಹಿನ್ನಡೆ: ಮೋದಿಯವರ ನಡೆಯಿಂದ ಪಾಕಿಸ್ತಾನಕ್ಕೆ ಲಾಭ – ಭಾರತ ತನ್ನ ರಾಜತಾಂತ್ರಿಕ ಪ್ರಭಾವ ಕಳೆದುಕೊಂಡಿದೆ ಎಂದ ಸೋನಿಯಾ ಗಾಂಧಿ

by Shwetha
June 28, 2026
0

ನವದೆಹಲಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಹಾಗೂ ಪಶ್ಚಿಮ ಏಷ್ಯಾ ರಾಷ್ಟ್ರಗಳ ಜೊತೆಗಿನ ಸಂಬಂಧದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸಮಾಧಾನ...

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

ಕಳೆದ 15 ವರ್ಷಗಳ ಪಾಪದ ಲೆಕ್ಕ ಚುಕ್ತಾ ಆಗಲಿದೆ:ಭದ್ರತೆಯಿಲ್ಲದೆ ಬಿಜೆಪಿ ನಾಯಕರು ಓಡಾಡಲಾಗದ ಕಾಲ ಬರಲಿದೆ – ಪವನ್ ಖೇರಾ

by Shwetha
June 28, 2026
0

ಹೊಸದೆಹಲಿ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರು ಸಾರ್ವಜನಿಕವಾಗಿ ಭದ್ರತೆಯಿಲ್ಲದೆ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸುವ ಮೂಲಕ ಕಾಂಗ್ರೆಸ್ ಹಿರಿಯ...

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

ಪ್ರದೀಪ್ ಈಶ್ವರ್ ಮತ್ತೆ ಗೆದ್ದರೆ ಅವರ ಮನೆ ಮುಂದೆ ಸೆಕ್ಯೂರಿಟಿ ಕೆಲಸ ಮಾಡ್ತೀನಿ: ಗಂಡಸ್ತನವಿದ್ರೆ ಸವಾಲ್ ಸ್ವೀಕರಿಸು ಶಾಸಕ ಪ್ರದೀಪ್ ಈಶ್ವರ್ ಗೆ ರವಿಕುಮಾರ್ ಓಪನ್ ಚಾಲೆಂಜ್

by Shwetha
June 28, 2026
0

ಬಿಡದಿ ಟೌನ್‌ಶಿಪ್ ವಿಚಾರವಾಗಿ ಆರಂಭವಾದ ರಾಜಕೀಯ ಜಟಾಪಟಿ ಈಗ ವೈಯಕ್ತಿಕ ಸವಾಲು ಮತ್ತು ಪಂಥಾಹ್ವಾನಗಳ ಹಂತಕ್ಕೆ ತಲುಪಿದೆ. ಸಿಎಂ ಡಿ ಕೆ ಶಿವಕುಮಾರ್ ಮತ್ತು ಕೇಂದ್ರ ಸಚಿವ...

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

ರಿಯಲ್ ಎಸ್ಟೇಟ್ ದಂಧೆಗಾಗಿ ರೈತರ ಭೂಮಿ ಬೇಕೆ: ರೈತರ ಬದುಕಿನೊಂದಿಗೆ ಚೆಲ್ಲಾಟವಾಡಬೇಡಿ -ಖಾಲಿ ಕುರ್ಚಿ ಬಿಟ್ಟು ಡಿಕೆಶಿಗೆ ಸವಾಲು ಹಾಕಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 28, 2026
0

ಬಿಡದಿ ಟೌನ್‌ಶಿಪ್ ಯೋಜನೆಯ ಹೆಸರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರಕ್ಕೆ ನೇರ ಸವಾಲು ಹಾಕಿದ್ದಾರೆ. ಭೈರಮಂಗಲದಲ್ಲಿ ನಡೆದ ರೈತರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram