ನಟಿ ಕಾಜೋಲ್ (Kajol) ಜೊತೆ ‘ದಿ ಟ್ರಯಲ್’ ವೆಬ್ ಸಿರೀಸ್ನಲ್ಲಿ ನಟಿಸಿದ್ದ ನೂರ್ ಮಾಳಬಿಕಾ ದಾಸ್ (Noor Malabika Das) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವರು ಮುಂಬೈನಲ್ಲಿನ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ನಟಿಯು ಜೂನ್ 6ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಯಾರಿಗೂ ಗೊತ್ತಾಗಿಲ್ಲ. ಮನೆಯಲ್ಲಿ ಯಾರೂ ಇರಲಿಲ್ಲ. ಅಕ್ಕಪಕ್ಕದ ಮನೆಯವರಿಗೂ ವಿಷಯ ತಿಳಿದಿಲ್ಲ. ಹಲವು ದಿನಗಳಾದ ನಂತರ ಅಪಾರ್ಟ್ ಮೆಂಟ್ ನಲ್ಲಿ ಕೆಟ್ಟ ವಾಸನೆ ಬಂದಿದೆ. ಕೂಡಲೇ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪೊಲೀಸರು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.