ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ನಡುವೆ ಪೈಪೋಟಿ ಇದೆ. ಹೀಗಾಗಿ ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತಿದ್ದರಿಂದ ದಿನಕ್ಕೊಂದು ಕಥೆ ಹೇಳುತ್ತಿದ್ದಾರೆ. 5 ವರ್ಷಗಳ ದುರಾಡಳಿತದಿಂದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಉತ್ತರ ಕರ್ನಾಟಕದ ಭಾಗದ ಜನರು ಸಿದ್ದರಾಮಯ್ಯ ಅವರ ಕೈ ಹಿಡಿಯದಿದ್ರೆ ಅವರು ರಾಜಕೀಯವಾಗಿ ಗೋವಿಂದ ಆಗುತ್ತಿದ್ದರು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬದಾಮಿಯಲ್ಲಿಯೂ ಸಿದ್ದರಾಮಯ್ಯ ಕಡಿಮೆ ಅಂತರದಲ್ಲಿ ಗೆದ್ದಿದ್ದಾರೆ. ಅಲ್ಲಿಯೂ ಸೋತಿದ್ದರೆ ಅವರ ರಾಜಕೀಯ ಜೀವನ ಕೊನೆಯಾಗುತ್ತಿತ್ತು. ದುರಾಡಳಿತ ಹಾಗೂ ಮೋದಿಯವರನ್ನು ಬೈದಿದ್ದು ಸಿದ್ದು ಸೋಲಿಗೆ ಪ್ರಮುಖ ಕಾರಣವಾಗಿದೆ ಎಂದರು.

ಕಾಂಗ್ರೆಸ್‍ನಲ್ಲೇ ಮುಖ್ಯಮಂತ್ರಿ ಹುದ್ದೆಗಾಗಿ ಡಿಕೆಶಿ, ಸಿದ್ದರಾಮಯ್ಯ ನಡುವೆ ಸ್ಪರ್ಧೆ ನಡೆಯುತ್ತಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸರಿಯಾಗಿ ಕೆಲಸ ಮಾಡಲಿಲ್ಲ ಎಂದು ತಮ್ಮ ಸ್ವಕ್ಷೇತ್ರದಲ್ಲಿ ಸೋತರು. ಸಿದ್ದರಾಮಯ್ಯ ಅವರ 5 ವಷಘಗಳ ದುರಾಡಳಿತದಿಂದ ಸೋಲಿಗೆ ಕಾರಣವಾಯ್ತು. ಕಾಂಗ್ರೆಸ್‍ನವರೇ ಸಿದ್ದರಾಮಯ್ಯ ವಿರುದ್ಧ ಸಂಚು ಮಾಡದಿದ್ದರೂ ಸೋಲು ಕಟ್ಟಿಟ್ಟ ಬುತ್ತಿ ಆಗಿತ್ತು. ಆದರೆ ಕಡಿಮೆ ಅಂತರದಲ್ಲಿ ಸೋಲುತ್ತಿದ್ದರು ಎಂದ ಪ್ರಹ್ಲಾದ್ ಜೋಶಿ, ನಾವು ಡಮ್ಮಿ ಕ್ಯಾಂಡಿಡೇಟ್ ಹಾಕಿದ್ದರೂ ಅವರು ಗೆಲ್ಲಬೇಕಿತ್ತು ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಭಾರತದಿಂದಲೇ ಕೊರೊನಾ ಹುಟ್ಟಿದ್ದು ಎಂದು ಆರೋಪ ಮಾಡಿದ್ದ ಚೀನಾ ತನ್ನ ಹೇಳಿಕೆ ವಾಪಸ್ ಪಡೆದಿದೆ. ಚೀನಾ ಏನು ಮಾಡಿದೆ ಎಂದು ಇಡೀ ಜಗತ್ತಿಗೆ ಗೊತ್ತಾಗಿದೆ. ವುಹಾನ್‍ನಲ್ಲಿ ಕೊರೊನಾ ವೈರಸ್ ಹರಡಿದ ವಿಚಾರವಾಗಿ ತನಿಖೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಗೆ ಚೀನಾ ಅವಕಾಶ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಗಳು ಹೋಗಿ ತನಿಖೆ ಮಾಡಲು ಅವಕಾಶ ನೀಡಿದೆ ಎಂದು ಜೋಶಿ ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








