ತೆರಿಗೆ ಪಾವತಿಸಲು ಆಗುತ್ತಿಲ್ಲ ಎಂದ ‘ಕಾಂಟ್ರವರ್ಸಿ ಕ್ವೀನ್’ ಕಂಗನಾ
ಮುಂಬೈ: ಬಾಲಿವುಡ್ ನ ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್ ಒಂದಲ್ಲಾ ಒಂದು ವಿಚಾರದಲ್ಲಿ ಸದಾ ಸುದ್ದಿಯಲ್ಲೇ ಇರುತ್ತಾರೆ.. ತೀರ ಇತ್ತೀಚೆಗೆ ಟ್ವೀಟ್ ನಿಂದ ಶಾಶ್ವತವಾಗಿ ನಟಿಗೆ ಗೇಟ್ ಪಾಸ್ ಕೊಟ್ಟಮೇಲೆ, ಕೂ ಹಾಗೂ ಇನ್ಸ್ಟಾದಲ್ಲಿ ಆಕ್ಟೀವ್ ಆಗಿದ್ದಾರೆ.. ಈ ನಡುವೆ ಕಂಗನಾ ತನ್ನಿಂದ ತೆರಿಗೆ ಕಟ್ಟಲು ಆಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾ ಮೂಲಕ ಅಳಲು ತೋಡಿಕೊಂಡಿದ್ದಾರೆ. ಕಂಗನಾ ಕಳೆದ ವರ್ಷದ ತೆರಿಗೆಯಲ್ಲಿ ಅರ್ಧದಷ್ಟನ್ನು ಮಾತ್ರ ಪಾವತಿ ಮಾಡಿದ್ದು, ಈ ಬಾರಿ ನನಗೆ ತೆರಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ತಮ್ಮ ಇನ್ ಸ್ಟಾಗ್ರಾಮ್ ಖಾತೆಯ ಸ್ಟೋರಿಯಲ್ಲಿ ಈ ಬಗ್ಗೆ ಮಾತನಾಡಿರೋ ಕಂಗನಾ ನನ್ನ ಒಟ್ಟು ಆದಾಯದಲ್ಲಿ ಶೇ. 45ರಷ್ಟು ತೆರಿಗೆ ಪಾವತಿಸುತ್ತೇನೆ. ನಾನು ಅತೀ ಹೆಚ್ಚು ತೆರಿಗೆ ಪಾವತಿಸುವ ನಟಿಯಾಗಿದ್ದೇನೆ. ಆದರೆ ಕೆಲಸ ಇಲ್ಲದೆ, ಕಳೆದ ವರ್ಷ ಅರ್ಧದಷ್ಟು ತೆರಿಗೆಯನ್ನು ಪಾವತಿಸಿದ್ದೇನೆ. ಇದೀಗ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ನನ್ನ ಜೀವನದಲ್ಲಿ ಹೀಗೆ ಆಗಿದ್ದು ಇದೇ ಮೊದಲ ಬಾರಿ ಎಂದಿದ್ದಾರೆ.
ನಾನು ತೆರಿಗೆ ಪಾವತಿಸುವುದು ತಡ ಮಾಡಿದರೆ ಸರ್ಕಾರ ನನಗೆ ಬಡ್ಡಿ ವಿಧಿಸುತ್ತದೆ. ಇದನ್ನು ನಾನು ಸ್ವಾಗತಿಸುತ್ತೇನೆ. ಈ ಸಮಯ ನಮ್ಮೆಲ್ಲರಿಗೂ ಕಠಿಣವಾಗಿರಬಹುದು. ಆದರೆ ಎಲ್ಲರೂ ಒಂದಾದರೆ ಸಮಯಕ್ಕಿಂತ ಕಠಿಣವಾಗಬಹುದು ಎಂದು ಬರೆದುಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.