ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ : ಬಸವರಾಜ ಬೊಮ್ಮಾಯಿ Basavaraja Bommai saaksha tv
ಹುಬ್ಬಳ್ಳಿ : ಸಂವಿಧಾನಾತ್ಮಕವಾಗಿ ಗುರುತಿಸಿಕೊಂಡಿರುವ ಧರ್ಮಗಳಿಗೆ ಯಾವುದೇ ಆತಂಕ ಬೇಡ, ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ಸಲ್ಲದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಯಾವುದೇ ಆತಂಕ ಬೇಡ.
ಇದರಿಂದ ಯಾವುದೇ ಧರ್ಮದವರಿಗೂ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ ಸಂವಿಧಾನಾತ್ಮಕವಾಗಿ ಗುರುತಿಸಿಕೊಂಡಿರುವ ಧರ್ಮಗಳಿಗೆ ಯಾವುದೇ ಆತಂಕ ಬೇಡ, ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ಸಲ್ಲದು.
ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ . ಆಸೆ, ಆಮಿಷಗಳನ್ನು ಒಡ್ಡಿ ಬಲವಂತವಾಗಿ ಮತಾಂತರ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಇದೇ ವೇಳೆ ಅಧಿವೇಶನದ ಬಗ್ಗೆ ಮಾತನಾಡಿ, ಅಧಿವೇಶನಲ್ಲಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.