ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಲವರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ: ಜಮೀರ್ ಟ್ವೀಟ್

admin by admin
April 21, 2020
in Newsbeat, Politics, Samagra karnataka
JDS
Share on FacebookShare on TwitterShare on WhatsappShare on Telegram

ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಗಲಾಟೆ ಹಾಗೂ ಅನಂತರ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಜಮೀರ್ ಅವರು, ‘ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ. ಲಾಕ್‌ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆಯ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದು ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಬೇಕೆಂದು.
ಆದರೆ ನಿನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ. ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದೂ ಭಾವಿಸಿರಲಿಲ್ಲ. ಯಾರೋ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಕೂಡ ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ, ಇದು ಒಂದಾಗಬೇಕಾದ ಸಮಯವೇ ಹೊರತು, ಸಮಾಜ ಒಡೆಯುವ ಸಮಯವಲ್ಲ.

Related posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

May 13, 2026
ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

May 13, 2026

ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಸಂತೋಷವಾಗಿದೆ. ಅವರಿಗೂ ಧನ್ಯವಾದ.

ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೊನಾದಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ. ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ.

ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೊನಾ ನಿರ್ಮೂಲನೆಯೊಂದೇ ಆಗಿರಲಿ’ ಎಂದು ಬರೆದುಕೊಂಡಿದ್ದಾರೆ.

Tags: PadarayanapuraZameer Ahmed
ShareTweetSendShare
Join us on:

Related Posts

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

ಸಿದ್ದರಾಮಯ್ಯ CM ಸ್ಥಾನಕ್ಕೆ ಅಡ್ಡಿ ಇಲ್ಲವೇ? ರಾಜಣ್ಣ ಮಹತ್ವದ ಸುಳಿವು

by Shwetha
May 13, 2026
0

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ನಡುವೆಯೇ ಮಾಜಿ ಸಚಿವ KN ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟ ಪುನಾರಚನೆ ನಡೆದರೂ...

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

ಬಂಗಾಳದಲ್ಲಿ ಕೇಸರಿ ಕ್ರಾಂತಿ: ರಸ್ತೆ ನಮಾಜ್ ನಿಷೇಧ, ಗೋವುಗಳ ರಕ್ಷಣೆಗೆ ಕಠಿಣ ಕಾನೂನು

by Shwetha
May 13, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಆಡಳಿತದ ಚುಕ್ಕಾಣಿ ಹಿಡಿದ ಕೆಲವೇ ದಿನಗಳಲ್ಲಿ ರಾಜ್ಯದ...

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

ಜ್ಯೋತಿಷಿಗೆ ಸರ್ಕಾರದಲ್ಲಿ ಹುದ್ದೆ..! ಸಿಎಂ ವಿಜಯ್ ನಿರ್ಧಾರಕ್ಕೆ ಭಾರೀ ಟೀಕೆ

by Shwetha
May 13, 2026
0

ತಮಿಳುನಾಡು ರಾಜಕೀಯದಲ್ಲಿ ಇದೀಗ ಹೊಸ ವಿವಾದ ಒಂದು ಭಾರೀ ಚರ್ಚೆಗೆ ಕಾರಣವಾಗಿದೆ. ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ತೆಗೆದುಕೊಂಡ ಒಂದು ನಿರ್ಧಾರಕ್ಕೆ ರಾಜಕೀಯ ವಲಯದಲ್ಲೇ ಅಲ್ಲ, ಸಾಮಾಜಿಕ...

ಜಾಗತಿಕ ಮಟ್ಟದ ಪ್ರಮುಖ ನಾಯಕರ ತಲೆದಂಡ : ಭೀತಿ ಹುಟ್ಟಿಸಿದ ಕೋಡಿಮಠದ ಶ್ರೀಗಳ ನುಡಿ

ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ

by Shwetha
May 13, 2026
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 13, 2026
0

ದಿನ ಭವಿಷ್ಯ : 13-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರುತ್ತವೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ನಿಮ್ಮ ಹೆಗಲೇರಲಿವೆ. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram