ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ಸಿಎಂ ಪುತ್ರ ವಿಜಯೇಂದ್ರ ಅವರು “ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಯಾರೂ ಆತಂಕಕ್ಕೊಳಗಾಗಬೇಕಿಲ್ಲ” ಎಂದು ಧೈರ್ಯ ತುಂಬಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, “ಮುಂಜಾಗ್ರತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯ ಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ ಹಾರೈಸಿ. ನಾನು ಗೃಹ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
ಮುಂಜಾಗರೂಕತೆ ದೃಷ್ಟಿಯಿಂದ ಪೂಜ್ಯ ತಂದೆಯವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಲ್ಲಿ ಯಾವುದೇ ರೋಗಲಕ್ಷಣಗಳಿಲ್ಲ. ಆರೋಗ್ಯಸ್ಥಿತಿ ಎಂದಿನಂತೆ ಸಹಜವಾಗಿದೆ. ತಜ್ಞ ವೈದ್ಯರುಗಳು ನಿರಂತರ ನಿಗಾ ವಹಿಸಿದ್ದಾರೆ. ಅಭಿಮಾನಿಗಳು, ಕಾರ್ಯಕರ್ತರು ಆತಂಕಗೊಳ್ಳಬೇಡಿ, ನೀವಿದ್ದಲ್ಲಿಂದಲೇ ಹಾರೈಸಿ. ನಾನು ಗೃಹ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ.
— Vijayendra Yeddyurappa (@BYVijayendra) August 3, 2020
ಇನ್ನು ನಿನ್ನೆ ರಾತ್ರಿ ಯಡಿಯೂರಪ್ಪನವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಈ ಕುರಿತು ಅವರು ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದರು. ಅವರಿಗೆ ಸೋಂಕು ತಗುಲಿದ ಬೆನ್ನಲ್ಲೇ ಸಿಎಂ ಪುತ್ರಿ ಪದ್ಮಾವತಿಯವರಿಗೂ ಕೊರೊನಾ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸಿಎಂ ಹಾಗೂ ಪುತ್ರಿ ಇಬ್ಬರನ್ನೂ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.