ವಿದ್ಯಾರ್ಥಿಗಳೇ ಗಮನಿಸಿ : ದ್ವಿತೀಯ ಪಿಯುಸಿ ಪರೀಕ್ಷೆ ರದ್ದು PUC exam
ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮಗೋಷ್ಠಿ ನಡೆಸುತ್ತಿದ್ದಾರೆ.
ತಜ್ಞರ ಸಲಹೆ ಸೂಚನೆ, ಹಿರಿಯ ಸಚಿವ, ಪೋಷಕರ, ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಇಲಾಖೆ ಒಂದು ನಿರ್ಧಾರಕ್ಕೆ ಬಂದಿದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಒಂದು ವರ್ಗಕ್ಕೆ ಬೇಸರ ಇದ್ದೇ ಇರುತ್ತೆ. ಆದರೂ ನಾವು ವಿಸ್ತøತವಾಗಿ ಚರ್ಚೆ ನಡೆಸಿದ್ದೇವೆ. ಪಿಯುಸಿ ಪರೀಕ್ಷೆಯನ್ನ ಸದ್ಯಕ್ಕೆ ನಡೆಸೋದಿಲ್ಲ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರಲ್ಲಿ ಪಾಸ್ ಮಾಡಲಾಗುವುದು. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿತ್ತು. ತಜ್ಞರ ವರದಿ ಆಧಾರಿಸಿ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.









