ತಮಿಳು ಚಿತ್ರರಂಗದಲ್ಲಿ ಖ್ಯಾತ ಸಿನಿಮಾಗಳನ್ನು ನೀಡಿದ್ದ ನಿರ್ಮಾಪಕ (Tamil Producer) ದಿಲ್ಲಿ ಬಾಬು (Dilli Babu) ಅನಾರೋಗ್ಯದ ಹಿನ್ನೆಲೆಯಲ್ಲಿ ಸೋಮವಾರ ತಮ್ಮ 50ನೇ ವಯಸ್ಸಿನಲ್ಲಿ ವಿಧಿ ವಶರಾಗಿದ್ದಾರೆ.
ಕುಟುಂಬದ ಮೂಲಗಳ ಮಾಹಿತಿಯಂತೆ, ಮಧ್ಯರಾತ್ರಿ 12:30ಕ್ಕೆ ಆಸ್ಪತ್ರೆಯಲ್ಲಿ ನಿರ್ಮಾಪಕ ಸಾವನ್ನಪ್ಪಿದ್ದಾರೆ. ಸೋಮವಾರ ದಿಲ್ಲಿ ಬಾಬು ಅವರ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ದಿಲ್ಲಿ ಬಾಬುಗೆ 50 ವರ್ಷ ವಯಸ್ಸಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಚೆನ್ನೈನ ಪೆರಂಗಳದೂರ್ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಿಲ್ಲಿ ಬಾಬು ಅವರು ರಾಕ್ಷಸನ್, ಓ ಮೈ ಕಡವಲೆ, ಬ್ಯಾಚುಲರ್ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು.