ದೇಶಕ್ಕೆ ಮತ್ತೆ ಕೊರೊನಾ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿಗಾ ಇಡುವಂತೆ ಸೂಚನೆ ನೀಡಿದೆ.
ಕೊರೊನಾ ರೂಪಾಂತರಿ ಜೆಎನ್1 ಮತ್ತು ಇನ್ಫ್ಲುಯೆನ್ಜಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಿದೆ.ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಹೀಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.
ಕ್ರಿಸ್ಮಸ್, ಹೊಸ ವರ್ಷದ ಸಂದರ್ಭದಲ್ಲಿಯೇ ಕೊರನಾ ವೈರಸ್ ಮತ್ತೊಮ್ಮೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.