ಬಳ್ಳಾರಿ: ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ರಾಜ್ಯ ಸರಕಾರದ ನಿರ್ಧಾರ ನೋವು ತಂದಿದೆ ಎಂದು ಹೇಳಿರುವ ಬಳ್ಳಾರಿ ಬಿಜೆಪಿ ಶಾಸಕ ಜಿ.ಸೋಮಶೇಖರೆಡ್ಡಿ, ಜಿಲ್ಲೆ ವಿಭಜನೆ ವಿರುದ್ಧ ವಿವಿಧ ಸಂಘಟನೆಗಳು ನವೆಂಬರ್ 26ರಂದು ಕರೆ ನೀಡಿರುವ ಬಳ್ಳಾರಿ ಬಂದ್ ವಿಚಾರದಲ್ಲಿ ದ್ವಂದ್ವ ನಿಲುವು ತಾಳಿದ್ದಾರೆ.
ನ.26ರಂದು ಬಳ್ಳಾರಿ ಬಂದ್ ಹಿನ್ನೆಲೆಯಲ್ಲಿ ಸರ್ಕಾರದ ಭಾಗವಾಗಿ ನೇರವಾಗಿ ಬೆಂಬಲಿಸಲ್ಲ. ಆದರೆ ಬಂದ್ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಗೊಂದಲದ ನಿಲುವು ತಾಳಿದ್ದಾರೆ.

ಬಳ್ಳಾರಿಯಲ್ಲಿ ನಡೆದ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಡಿಯಲ್ಲಿ ನಡೆದ ಅಂಧತ್ವ ನಿಯಂತ್ರಣ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿಜಯನಗರ ಜಿಲ್ಲೆ ವಿಭಜನೆ ಹೋರಾಟಕ್ಕೆ ಸಂಬಂಧಿಸಿದಂತೆ ತೀವ್ರ ಅಸಹಾಯಕ ಕಥೆ ವ್ಯಕ್ತಪಡಿಸಿದ ಶಾಸಕ ಸೋಮಶೇಖರ್ ರೆಡ್ಡಿ, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ನನ್ನನ್ನು ಸದಾ ಕಾಡುತ್ತದೆ ಎಂದಿದ್ದಾರೆ.
ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಭಜನೆ ಮಾಡದಿರುವಂತೆ ಮನವಿ ಮಾಡಲಾಗಿದೆ. ಜಿಲ್ಲೆಯು ಇಂದಲ್ಲ ನಾಳೆ ಯಾವುದೇ ಸರ್ಕಾರ ಬಂದ್ರೂ ವಿಭಜನೆಯಾಗೋದು ನಿಲ್ಲಲ್ಲವೆಂದು ಮುಖ್ಯಮಂತ್ರಿಗಳಾದಿಯಾಗಿ ಅನೇಕ ಹಿರಿಯ ಸಚಿವರು ಹೇಳಿದ್ದಾರೆ. ಪ್ರತಿರೋಧ ಕೈಬಿಡಲು ತಿಳಿಸಿದ್ದಾರೆ ಎಂದರು.
ಬಳ್ಳಾರಿ ವಿಭಜನೆಯಾಗದೇ ಅಖಂಡವಾಗಿರಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಜಿಲ್ಲೆಯ ಎಲ್ಲ ಶಾಸಕರು ಬಯಸಿದ್ರೇ ಮತ್ತೊಮ್ಮೆ ಮುಖ್ಯಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೊಂಡಯ್ಯ ಬಿಟ್ಟರೇ ಬೇರೆ ಯಾರೂ ಇಬ್ಭಾಗಕ್ಕೆ ಬೆಂಬಲಿಸಿಲ್ಲ. ಸಚಿವ ಶ್ರೀರಾಮುಲು ಸಹಮತ ವ್ಯಕ್ತಪಡಿಸಿರುವುದು ಅವರು ವೈಯಕ್ತಿಕ ವಿಚಾರ ಎಂದರು.
ಜಾತಿಗೊಂದು ನಿಗಮ ಮಾಡುವುದು ಸರಿಯಲ್ಲ. ನಿಗಮದ ಬದಲಿಗೆ ಸರಕಾರವು ಎಲ್ಲ ಜಾತಿಗಳಲ್ಲಿನ ಬಡಜನರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








