ಭಾರತದ ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಖಾಸಗಿ ಮೋಟರ್ಸೈಕಲ್ಗಳನ್ನು ಈಗ ಪ್ರಯಾಣಿಕರ ಓಡಾಟಕ್ಕೆ ಬಳಸಬಹುದಾಗಿದೆ. ಕೇಂದ್ರ ಸಾರಿಗೆ ಸಚಿವಾಲಯ 2025ರ ಮೋಟರ್ ವೆಹಿಕಲ್ ಅಗ್ರಿಗೇಟರ್ ಗೈಡ್ಲೈನ್ಸ್ ಅಡಿಯಲ್ಲಿ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಈ ಹೊಸ ಮಾರ್ಗಸೂಚಿಗಳ ಪ್ರಕಾರ, ರಾಜ್ಯ ಸರ್ಕಾರದ ಅನುಮತಿಯೊಂದಿಗೆ ಖಾಸಗಿ ಬೈಕ್ಗಳನ್ನು ಟ್ಯಾಕ್ಸಿಯಾಗಿ ಬಳಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ Rapido, Uber ಹಾಗು ಇತರ ಬೈಕ್ ಟ್ಯಾಕ್ಸಿ ಸೇವೆಗಳನ್ನು ನೀಡುವ ಕಂಪನಿಗಳಿಗೆ ಸಮಾಧಾನ ಸಿಕ್ಕಂತಾಗಿದೆ.
ಈ ನಿರ್ಧಾರದಿಂದ:
ಸಂಚಾರ ದಟ್ಟಣೆ ಕಡಿಮೆಯಾಗಲಿದೆ
ಮಾಲಿನ್ಯ ನಿಯಂತ್ರಣ ಸಾಧ್ಯವಾಗಲಿದೆ
ದೈನಂದಿನ ಪ್ರಯಾಣಿಕರಿಗೆ ಕಡಿಮೆ ವೆಚ್ಚದ ಪ್ರಯಾಣ ಸಿಗಲಿದೆ
ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇದೆ
ಇನ್ನೊಂದು ಪ್ರಮುಖ ಅಂಶವೇನೆಂದರೆ, ಈ ಸೇವೆಯನ್ನು ಆರಂಭಿಸಲು ಪ್ರತಿ ರಾಜ್ಯ ಸರ್ಕಾರವೂ ತನ್ನದೇ ಆದ ಅನುಮತಿ ನೀಡಬೇಕು. ಇದರಿಂದಾಗಿ ನೂತನ ಮಾರ್ಗಸೂಚಿಗಳು ಹಂತ ಹಂತವಾಗಿ ಜಾರಿಗೆ ಬರಲಿವೆ.
ಸಾಮಾನ್ಯ ಸಾರ್ವಜನಿಕರಿಗೂ, ಸ್ಟಾರ್ಟ್ಅಪ್ ಕಂಪನಿಗಳಿಗೊ ಸಹ ಇದು ಖುಷಿಯ ಸುದ್ದಿ ಆಗಿದ್ದು, ಮುಂದಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಲಭ್ಯವಾಗುವ ನಿರೀಕ್ಷೆ ಇದೆ.








