ಕೋಲಾರ : ಈ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಸಿಎಂ ಆಗಿದ್ದರೇ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸೋಕೆ ಆಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದಲ್ಲಿ ಸಿದ್ದರಾಮಯ್ಯ ಅವರ ಆರೋಪಗಳ ಬಗ್ಗೆ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳ ಮೇಲೆ ಆ ಭಗವಂತನ ಇಚ್ಛೆ ಇರೋದರಿಂದ ಸದ್ಯ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣ ಆಗುತ್ತಿದೆ. ಒಂದು ವೇಳೆ ಈ ಪರಿಸ್ಥಿತಿಯಲ್ಲಿ ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ ರಾಜ್ಯವನ್ನು ಆ ಭಗವಂತನ ಕೈಯಲ್ಲೂ ಉಳಿಸೋಕೆ ಆಗುತ್ತಿರಲಿಲ್ಲ. ಬೇರೆ ಬೇರೆ ಕಡೆಗೆ ಹೋಗಿ ಇತಿಹಾಸ ಬರೆದವರು ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದರು.
ಇದೇ ವೇಳೆ ಕೊರೊನಾ ವಿಚಾರವಾಗಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಟೀಲ್, ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ. ವಿನಾಕಾರಣ ವಿರೋಧ ಪಕ್ಷದವರು ಮೆಡಿಕಲ್ ಕಿಟ್ ಹಗರಣದಲ್ಲಿ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬೊಬ್ಬೆ ಹಾಕುತ್ತಿದ್ದಾರೆ ಎಂದರು.








