ನವದೆಹಲಿ: ಕೊರೊನಾಸುರನ ಹೊಡೆತಕ್ಕೆ ದೇಶವೇ ಲಾಕ್ ಡೌನ್ ಆಗಿದೆ. ಕೊರೊನಾ ಸೋಂಕು ದೇಶದಲ್ಲಿ ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಪರಿಷ್ಕರಣೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ. 2021ರ ಮೊದಲ ಹಂತದ ಜನಗಣತಿ ಮತ್ತು ಎನ್‌ಪಿಆರ್ ಅನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಕೊವಿಡ್-19 ಸೋಂಕು ಭೀತಿ ಹಿನ್ನೆಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಎನ್‌ಪಿಆರ್‌ನಂತಹ ಯೋಜನೆಗಳನ್ನು ಸರ್ಕಾರ ಮುಂದೂಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸರ್ಕಾರವನ್ನು ಇತ್ತೀಚೆಗೆ ಒತ್ತಾಯಿಸಿದ್ದವು.








