ಯಂಗ್ ಟೈಗರ್ ಜ್ಯೂ. NTR ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುವುದು ಪಕ್ಕಾ…!
ಕೆಜಿಎಫ್ ಮೂಲಕ ಭಾರತದ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಸದ್ಯ ಪ್ರಭಾಸ್ ನಟನೆಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಜ್ಯೂನಿಯರ್ NTR ಜೊತೆಗೆ ಸಿನಿಮಾ ಮಾಡಲಿದ್ದಾರೆ ಎಂಬ ವದಂತಿಗಳು ಹರಿದಾಡಿತ್ತು. ಇದೀಗ ವದಂತಿಗಳಿಗೆ ತೆರೆ ಬಿದ್ದಿದೆ..
ಇಂದು ಜೂ. ಎನ್ ಟಿ ಆರ್ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಜೂನಿಯರ್ ಎನ್ ಟಿ ಆರ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿಬರುವುದು ಪಕ್ಕಾ ಎಂಬ ಸುದ್ದಿ ಬಹಿರಂಗವಾಗಿದೆ. ಈ ಸುದ್ದಿಯನ್ನು ಸ್ವತಃ ಪ್ರಶಾಂತ್ ನೀಲ್ ಖಚಿತಪಡಿಸಿದ್ದಾರೆ. ಎನ್‌ಟಿಆರ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ನೀಲ್, ಎನ್‌ಟಿಆರ್ 31 ಪ್ರಾಜೆಕ್ಟ್ ಶುರುವಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಬಿಗ್ ಬಜೆಟ್ ಸಿನಿಮಾಗೆ ಮೈತ್ರಿ ಮೂವೀಸ್ ಬಂಡವಾಳ ಹೂಡಲಿದೆ. ಸೂಪರ್ ಹಿಟ್ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಈ ಸಂಸ್ಥೆ ಇದೀಗ NTR ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಿನಿಮಾಗೆ ಬಂಡವಾಳ ಹಾಕಲು ಹೊರಟಿದ್ದು, ಜ್ಯೂನಿಯರ್ NTR ಫ್ಯಾನ್ಸ್ ಗೆ ಭರ್ಜರಿ ಗಿಫ್ಟ್ ಸಿಕ್ಕಿದೆ. ಮೂಲಗಳ ಪ್ರಕಾರ ಿದು ಸಹ ಪ್ಯಾನ್ ಇಂಡಿಯಾ ಸಿನಿಮಾವಾಗಿರಲಿದೆ.
ಪ್ರಸ್ತುತ NTR ರಾಜಮೌಳಿ ನಿರ್ದೇಶನದ RRR ಸಿನಿಮಾದಲ್ಲಿ ಬ್ಯೂಸಿಯಾಗಿದ್ದಾರೆ. ಈ ಸಿನಿಮಾದಲ್ಲಿ ರಾಮ್ ಚರಣ್ , ಅಜಯ್ ದೇವಗನ್ ಸೇರಿ ದೊಡ್ಡ ದೊಡ್ಡ ನಟರ ತಾರಾಬಳಗವೇ ಇದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.