ಬೆಂಗಳೂರು : ರಾಜ್ಯದಲ್ಲಿ ಕೊರೋನಾಸುರನ ಅಟ್ಟಹಾಸ ಮುಂದುವರಿದಿದ್ದು, ಇಂದು ಹೊಸದಾಗಿ 18 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು 18 ಜನರಿಗೆ ಕೊರೋನಾ ಸೋಂಕು ಪಾಸಿಟಿವ್ ಆಗಿರುವುದಾಗಿ ತಿಳಿಸಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿರುವ ಮೂಲಕ, ಕೊರೊನಾ ಸೋಂಕಿತರ ಸಂಖ್ಯೆ 500ಕ್ಕೆ ಸಮೀಪಿಸಿದೆ.
ಇಂದು ಬೆಂಗಳೂರು – 11, ತುಮಕೂರು- 01, ಬೆಳಗಾವಿ-02, ವಿಜಯಪುರ-01, ಬಾಗಲಕೋಟೆ-02 ಮತ್ತು ಚಿಕ್ಕಬಳ್ಳಾಪುರ-01 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೇ ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 18 ಜನರು ಸಾವನ್ನಪ್ಪಿದ್ದಾರೆ. 150 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.








