ನವದೆಹಲಿ : ಭಾರತದಲ್ಲಿ ರಕ್ಕಸ ಕೊರೊನಾಸುರನ ಅಬ್ಬರ ಮುಂದುವರಿದೆ. ಕೇವಲ ಒಂದೇ ದಿನದಲ್ಲಿ ಅರ್ಧ ಲಕ್ಷ ಸೋಂಕಿತರು ದೇಶದಲ್ಲಿ ಪತ್ತೆಯಾಗುತ್ತಿದ್ದು, ಪ್ರಕರಣಗಳ ಸಂಖ್ಯೆ ಇದೀಗ 12 ಲಕ್ಷದ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 45,720 ಹೊಸ ಕೇಸ್ ಗಳು ಪತ್ತೆಯಾಗಿವೆ. ಒಂದೇ ದಿನ 1,129 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 12,38,635ಕ್ಕೆ ಹಾಗೂ ಮೃತರ ಸಂಖ್ಯೆ 29,861ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ.63.13 ರಷ್ಟು ಅಂದರೆ 7,82,606 ಮಂದಿ ಕೊರೊನಾದಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 4,26,167 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.








