ದೇಶದಲ್ಲಿ ಲಾಕ್ ಡೌನ್ ಹೊರತಾಗಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ದೇಶಾದ್ಯಂತ ಸೋಂಕಿತರ ಸಂಖ್ಯೆ 13 ಸಾವಿರ ಗಡಿ ದಾಟುವ ಮೂಲಕ ಮತ್ತಷ್ಟು ಆತಂಕ ಹೆಚ್ಚಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಇಲ್ಲಿಯವರೆಗೂ ಒಟ್ಟು 13 ಸಾವಿರದ 387 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಇದರಲ್ಲಿ 1748 ಮಂದಿ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 11 ಸಾವಿರದ 201 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಸಾವಿನ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗಿದ್ದು, ಇಲ್ಲಿಯವರೆಗೂ 437 ಮಂದಿ ಮಹಾಮಾರಿಯಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೊನಾ ಹೊಡೆತಕ್ಕೆ “ಮಹಾ” ತತ್ತರ!
ಮಹಾರಾಷ್ಟ್ರದಲ್ಲಿ ಕೊರೊನಾಸುರನ ತಾಂಡವ ಮುಂದುವರೆದಿದ್ದು ಸೋಂಕಿತರ ಸಂಖ್ಯೆ 3205ಕ್ಕೆ ಏರಿದೆ, ಎರಡನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿ ಇದ್ದು 1640 ಪ್ರಕರಣಗಳು ಕಂಡುಬಂದಿವೆ.








