ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ ಪಡೆದ ನೂಪುರ್ ಶರ್ಮಾ…
ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಪಡೆದಿದ್ದಾರೆ. ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆಗಸ್ಟ್ 10ರ ವರೆಗೆ ಬಂಧಿಸದಂತೆ ಆದೇಶಿಸಿದೆ.
ನೂಪುರ್ ಶರ್ಮಾ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು, ಬಂಧನದಿಂದ ತಡೆಯಾಜ್ಞೆ ಹಾಗೂ ರಕ್ಷಣೆ ನೀಡಬೇಕು ಎಂದು ನೂಪುರ್ ಶರ್ಮಾ ಪರ ವಕೀಲರಾದ ಮಣಿಂದರ್ ಸಿಂಗ್ ನ್ಯಾಯಾಲಯದಲ್ಲಿ ವಾದಿಸಿದರು.
ಈ ಹಿನ್ನೆಲೆಯಲ್ಲಿ ಆಗಸ್ಟ್ 10ರವರೆಗೆ ನೂಪುರ್ ಅವರನ್ನು ಬಂಧಿಸದಂತೆ ನ್ಯಾಯಾಲಯ ಸೂಚಿಸಿದೆ. ಇದರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಈ ಸಂಬಂಧ ನೋಟಿಸ್ ಜಾರಿ ಮಾಡಲಾಗಿದೆ.
ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆ ನೀಡಿದ ಶರ್ಮಾ ವಿರುದ್ಧ ದೆಹಲಿ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಕರ್ನಾಟಕ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಅಸ್ಸಾಂನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ : Ramanagar | ನನಗೂ ಅವಕಾಶ ಕೊಡಿ : ರಾಮನಗರ ಜನರಿಗೆ ಡಿಕೆಶಿ ಮನವಿ








