ಮುಂಬೈ: ಕಾಲೇಜಿನಿಂದ ಮನೆಗೆ ಹಿಂತಿರುಗುತ್ತಿದ್ದ ನರ್ಸಿಂಗ್ ವಿದ್ಯಾರ್ಥಿನಿಯ (Student) ಪ್ರಜ್ಞೆ ತಪ್ಪಿಸಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಆಟೋ ಚಾಲಕನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ (Maharashtra) ರತ್ನಗಿರಿಯಲ್ಲಿ ನಡೆದಿದೆ. 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಆಟೋ ಹತ್ತಿದ್ದಾಳೆ. ಆದರೆ, ಕಾಮುಕ ಚಾಲಕ ದಾರಿ ಮಧ್ಯೆ ನೀರಿನಲ್ಲಿ ಅಮಲು ಪದಾರ್ಥ ಸೇರಿಸಿ ವಿದ್ಯಾರ್ಥಿನಿಗೆ ಕುಡಿಯಲು ಕೊಟ್ಟಿದ್ದಾನೆ.
ಇದನ್ನು ಕುಡಿದ ವಿದ್ಯಾರ್ಥಿನಿ ಕೆಲವೇ ಸಮಯದಲ್ಲಿ ಪ್ರಜ್ಞೆ ತಪ್ಪಿದ್ದಾಳೆ. ನಂತರ ಆಕೆಯನ್ನು ಯಾರೂ ಇಲ್ಲದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಲಕ ಅತ್ಯಾಚಾರ ನಡೆಸಿದ್ದಾನೆ. ಯುವತಿ ಎಚ್ಚರವಾದ ನಂತರ ಮನೆಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾಳೆ. ನಂತರ ವಿದ್ಯಾರ್ಥಿನಿ ಈ ಕುರಿತು ದೂರು ದಾಖಲಿಸಿದ್ದಾರೆ. ಸದ್ಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಘಟನೆ ಖಂಡಿಸಿ ರತ್ನಗಿರಿಯಲ್ಲಿ ರಸ್ತೆ ತಡೆ ನಡೆಸಿ ಪೊಲೀಸರು ಪ್ರತಿಭಟನೆ ನಡೆಸಿದ್ದಾರೆ. ರತ್ನಗಿರಿಯ ನರ್ಸಿಂಗ್ ಸಿಬ್ಬಂದಿ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದು, ಕೃತ್ಯವೆಸಗಿದ ವ್ಯಕಿಯನ್ನು ಬಂಧಿಸಿ ಗಲ್ಲಿಗೇರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ದೇಶದ ಜನರು ಬೆಚ್ಚಿ ಬಿದ್ದಿದ್ದಾರೆ.