ವಿಜಯಪುರ : ಕೊಲ್ಹಾರ ಪಟ್ಟಣಕ್ಕೆ ಮೂಲ ಸೌಕರ್ಯಗಳಾದ ರಸ್ತೆ ಚರಂಡಿ, ಶೌಚಾಲಯ, ವಿದ್ಯುತ್ ಬೀದಿ ದೀಪ ಮತ್ತು ಗುಣಮಟ್ಟದ ಆಸ್ಪತ್ರೆಗಳನ್ನು ದೊರಕಿಸಿಕೊಡುವಂತೆ ಆಗ್ರಹಿಸಿ ನ್ಯಾಯ ಕ್ರಾಂತಿ ಸಂಘ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಕೊಲ್ಹಾರ ಪಟ್ಟಣದಲ್ಲಿ ರಸ್ತೆಗಳು ಹದಗೆಟ್ಟಿದ್ದು, ಹೊಲ ಗದ್ದೆಗಳಂತೆ ಮಾರ್ಪಟಿವೆ. ಸೂಕ್ತ ರೀತಿಯ ಚರಂಡಿ, ಶೌಚಾಲಯ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತೆ ಆಗಿದ್ದು, ಈ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ನ್ಯಾಯ ಕ್ರಾಂತಿ ಸಂಘ ಆಗ್ರಹಿಸಿದೆ.
ಈ ಸಮಸ್ಯೆಗಳನ್ನು ಈಗಾಗಲೇ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಮಾಡಲಾಗಿದೆ. ಆದ್ರೆ ಯಾವೊಬ್ಬ ಅಧಿಕಾರಿ ಕೂಡ ಈ ಸ್ಪಂದಿಸಿಲ್ಲ. ಹೀಗಾಗಿ ಈ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ನ್ಯಾಯ ಕ್ರಾಂತಿ ಸಂಘ ಉಗ್ರ ಪ್ರತಿಭಟನೆ, ಸತ್ಯಾಗ್ರಹ ಮಾಡುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ.








