ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

NZ v BAN: ಚೆನ್ನೈನಲ್ಲಿ ಕಿವೀಸ್‌ಗೆ ಬಾಂಗ್ಲಾ ಸವಾಲು: ನ್ಯೂಜಿ಼ಲೆಂಡ್‌ಗೆ 3ನೇ ಜಯದ ನಿರೀಕ್ಷೆ

C Dinesh by C Dinesh
October 13, 2023
in Sports, ಕ್ರಿಕೆಟ್ ವಿಶ್ವಕಪ್ 2023
NZ v BAN

NZ v BAN

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಆರಂಭ ಕಂಡಿರುವ ನ್ಯೂಜಿ಼ಲೆಂಡ್‌ ತನ್ನ 3ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನ ಎದುರಿಸಲಿದ್ದು, ಉಭಯ ತಂಡಗಳ ನಡುವಿನ ಮುಖಾಮುಖಿಗೆ ಚೆನ್ನೈನಲ್ಲಿ ವೇದಿಕೆ ಸಜ್ಜಾಗಿದೆ.

ಪ್ರಸಕ್ತ ವಿಶ್ವಕಪ್‌ನ ಬಲಿಷ್ಠ ತಂಡವಾಗಿ ಮಿಂಚಿರುವ ಕಿವೀಸ್‌ ಪಡೆ, ಟೂರ್ನಿಯಲ್ಲಿ ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಗೆಲುವಿನ ನಗೆಬೀರಿದ್ದು, 3ನೇ ಗೆಲುವಿನ ನಿರೀಕ್ಷೆಯಲ್ಲಿದೆ. ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ವಿರುದ್ಧ ಗೆದ್ದು ಶುಭಾರಂಭ ಮಾಡಿದ್ದ ಕಿವೀಸ್‌, 2ನೇ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಕೂಡ ನಿರೀಕ್ಷಿತ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ 3ನೇ ಪಂದ್ಯದಲ್ಲಿ ಬಾಂಗ್ಲಾದೇಶವನ್ನ ಮಣಿಸುವ ಲೆಕ್ಕಾಚಾರದಲ್ಲಿದೆ.

New Zealand

ಬ್ಯಾಟಿಂಗ್‌ ಹಾಗೂ ಬೌಲಿಂಗ್‌ನಲ್ಲಿ ಅತ್ಯಂತ ಬಲಿಷ್ಠವಾಗಿರುವ ಕಿವೀಸ್‌, ಶಕೀಬ್‌-ಅಲ್‌-ಹಸನ್‌ ಸಾರಥ್ಯದ ಬಾಂಗ್ಲಾದೇಶವನ್ನ ಸುಲಭವಾಗಿ ಮಣಿಸುವ ನಿರೀಕ್ಷೆ ಹೊಂದಿದ್ದರೂ, ಬಾಂಗ್ಲಾ ಟೈಗರ್ಸ್‌ ಯಾವುದೇ ಸಂದರ್ಭದಲ್ಲಾದರೂ ಬಲಿಷ್ಠ ಕಮ್‌ಬ್ಯಾಕ್‌ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮೇಲ್ನೋಟಕ್ಕೆ ನ್ಯೂಜಿ಼ಲೆಂಡ್‌ ಬಲಿಷ್ಠವಾಗಿದ್ದರೂ, ಬಾಂಗ್ಲಾ ಪಡೆಯನ್ನ ಲಘುವಾಗಿ ಪರಿಗಣಿಸುವಂತಿಲ್ಲ.
Bangladesh

ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧದ 6 ವಿಕೆಟ್‌ಗಳಿಂದ ಗೆದ್ದು ಶುಭಾರಂಭ ಮಾಡಿದ್ದ ಬಾಂಗ್ಲಾ ಪಡೆ, ನಂತರ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 137 ರನ್‌ಗಳ ಭಾರೀ ಅಂತರದ ಸೋಲು ಕಂಡಿತ್ತು. ಹೀಗಾಗಿ ನ್ಯೂಜಿ಼ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆ ಬಾಂಗ್ಲಾ ತಂಡಕ್ಕಿದೆ. ಆದರೆ ಸತತ ಎರಡು ಪಂದ್ಯಗಳನ್ನ ಗೆದ್ದು ಪ್ರಾಬಲ್ಯ ಸಾಧಿಸಿರುವ ಕಿವೀಸ್‌ ತಂಡವನ್ನ ಮಣಿಸುವುದು ಬಾಂಗ್ಲಾ ಹುಲಿಗಳಿಗೆ ಸುಲಭದ ಸಂಗತಿಯಲ್ಲ.

Related posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

February 3, 2026
ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

February 3, 2026

ಕಿವೀಸ್‌ ಪಡೆಯ ಪ್ರಾಬಲ್ಯ:
ಏಕದಿನ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ನ್ಯೂಜಿ಼ಲೆಂಡ್‌ ಪೂರ್ಣ ಪ್ರಾಬಲ್ಯ ಹೊಂದಿದೆ. ಉಭಯ ತಂಡಗಳು ಈವರೆಗೂ 41 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಬಾಂಗ್ಲಾದೇಶ 10 ಪಂದ್ಯದಲ್ಲಿ ಮಾತ್ರವೇ ಜಯದ ನಗೆಬೀರಿದೆ. ಇನ್ನೂ ಏಕದಿನ ವಿಶ್ವಕಪ್‌ನಲ್ಲಿ ಎರಡು ತಂಡಗಳು 5 ಬಾರಿ ಹಣಾಹಣಿ ನಡೆಸಿದ್ದು, ಈ ಎಲ್ಲಾ 5 ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ.

ವಿಲಿಯಂಸನ್‌ ಕಮ್‌ಬ್ಯಾಕ್‌:
ಗಾಯದ ಸಮಸ್ಯೆಯಿಂದಾಗಿ ಟೂರ್ನಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಕೇನ್‌ ವಿಲಿಯಂಸನ್‌, ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಒಂದೊಮ್ಮೆ ಕೇನ್‌ ವಿಲಿಯಂಸನ್‌ ಕಮ್‌ಬ್ಯಾಕ್‌ ಮಾಡಿದ್ದೇ ಆದಲ್ಲಿ, ಇಂದಿನ ಪಂದ್ಯದಲ್ಲಿ ಕಿವೀಸ್‌ ಪಡೆಯನ್ನ ಮುನ್ನಡೆಸುವ ನಿರೀಕ್ಷೆ ಇದೆ.

ಬಾಂಗ್ಲಾದೇಶ ತಂಡ:
ಶಕೀಬ್‌-ಅಲ್-ಹಸನ್(ನಾಯಕ), ಲಿಟನ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದೋಯ್‌, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೆದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಫಿಜು಼ರ್‌ ರಹಮಾನ್‌, ಹಸನ್‌ ಮಹಮೊದ್‌, ಶೋರಿಫುಲ್ ಇಸ್ಲಾಂ, ತಂಝೀಮ್ ಹಸನ್ ಸಾಕಿಬ್.

ನ್ಯೂಜಿಲೆಂಡ್ ತಂಡ:
ಕೇನ್ ವಿಲಿಯಮ್ಸನ್(ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲೊಕ್ಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲೇಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್‌ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

NZ v BAN, New Zealand, Bangladesh, ODI Cricket, World Cup

Tags: BangladeshNew ZealandNZ v BANODI cricketWorld Cup
ShareTweetSendShare
Join us on:

Related Posts

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

Inderjit Singh Bindra: The bold administrator who changed the face of Indian cricket..!

ಇಂದರ್‌ಜಿತ್ ಸಿಂಗ್ ಬಿಂದ್ರಾ : ಭಾರತೀಯ ಕ್ರಿಕೆಟ್‌ನ ಚಿತ್ರಣ ಬದಲಾಯಿಸಿದ ದಿಟ್ಟ ಆಡಳಿತಗಾರ..!

by admin
January 29, 2026
0

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅರ್ಥಾತ್ ಬಿಸಿಸಿಐ.. ಇವತ್ತು ವಿಶ್ವ ಕ್ರಿಕೆಟ್‍ನ ಕುಬೇರ. ಕೈ ಬೆರಳಿನಲ್ಲಿ ವಿಶ್ವ ಕ್ರಿಕೆಟ್ ಅನ್ನು ಆಳುತ್ತಿರುವ ಬಿಸಿಸಿಐ ಇಷ್ಟೊಂದು ಶ್ರೀಮಂತಗೊಳ್ಳಲು ಪ್ರಮುಖ...

CM Cup 2026 Jersey Unveiled - Uniquely Concepted Shuttle Badminton Tournament to be Held on Feb. 21-22

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ – ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ

by admin
January 27, 2026
0

ಸಿಎಂ ಕಪ್‌ 2026ರ ಜೆರ್ಸಿ ಅನಾವರಣ * ಫೆ. 21-22ರಂದು ನಡೆಯಲಿರುವ ವಿಶಿಷ್ಟ ಪರಿಕಲ್ಪನೆಯ ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ * * ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌,...

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

ಟಿ20 ವಿಶ್ವಕಪ್ 2026 ಬಾಂಗ್ಲಾದೇಶಕ್ಕೆ ಗೇಟ್ ಪಾಸ್ ಸ್ಕಾಟ್ಲೆಂಡ್‌ಗೆ ರೆಡ್ ಕಾರ್ಪೆಟ್ ಐಸಿಸಿ ಐತಿಹಾಸಿಕ ತೀರ್ಮಾನ

by Shwetha
January 25, 2026
0

ವಿಶ್ವ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸುವಂತಹ ಸುದ್ದಿಯೊಂದು ಹೊರಬಿದ್ದಿದೆ. 2026ರಲ್ಲಿ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿರುವ ಟಿ20 ವಿಶ್ವಕಪ್ ಟೂರ್ನಿಯಿಂದ ನೆರೆಯ ಬಾಂಗ್ಲಾದೇಶವನ್ನು ಅಧಿಕೃತವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram