ಚಂಡೀಗಢ : ಪಾಪಿ ಶಿಕ್ಷಕನೊಬ್ಬ ಸ್ಮಾರ್ಟ್ ಕ್ಲಾಸ್ ನ ಎಲ್ ಸಿಡಿ ಪರದೆಯ ಮೇಲೆ ಅಶ್ಲೀಲ ವೀಡಿಯೋ (Obscene Video) ತೋರಿಸಿದ್ದು, ಸದ್ಯ ಆರೋಪಿ ಶಿಕ್ಷಕನನ್ನು ಪಂಜಾಬ್ (Punjab) ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಾಜೀವ್ ಶರ್ಮಾ ಎನ್ನಲಾಗಿದೆ. ಗೋಬಿಂದಪುರ ಮೊಹಲ್ಲಾದ (Gobindpura Mohalla) ಸರ್ಕಾರಿ ಮಿಡಲ್ ಸ್ಮಾರ್ಟ್ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಆರನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ್ದ. ಅಲ್ಲದೇ, ಅಸಭ್ಯವಾಗಿ ಸನ್ನೆ (Vulgar Gestures) ಮಾಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಶಿಕ್ಷಕನ ಮೇಲೆ ಆರೋಪಿಸಿದ್ದಾರೆ.
ಹೀಗಾಗಿ ಬಾಲಕಿಯೊಬ್ಬಳ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೊ (POCSO) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸತ್ನಾಂಪುರನ (Satnampura) ಠಾಣಾಧಿಕಾರಿ ಗುರಿಂದರ್ಜಿತ್ ಸಿಂಗ್ ಹೇಳಿದ್ದಾರೆ.