ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಯನ್ನು ಬಂಧಿಸಿದ್ದಾರೆ.
ಅಧಿಕಾರಿಯೊಬ್ಬಾತ ಚೆಕ್ ಮೂಲಕ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ದಾಸನಪುರದ ಕಂದಾಯ ನಿರೀಕ್ಷಕ ವಸಂತ್, ಖಾಸಗಿ ಚಾಲಕನನ್ನು ಬಂಧಿಸಲಾಗಿದೆ.
ಬಂಧಿತ ವ್ಯಕ್ತಿ ಚೆಕ್ನಲ್ಲಿ 4 ಲಕ್ಷ ರೂ. ಹಣವನ್ನು ಚೆಕ್ನಲ್ಲಿ ಪಡೆದಿದ್ದ ಎನ್ನಲಾಗಿದೆ. ನಂತರ ಖಾಸಗಿ ಹೋಟೆಲ್ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ವಿಚಾರಣೆ ಸಂದರ್ಭದಲ್ಲಿ ಮನೆಯಲ್ಲಿ ಹಣ ಇಟ್ಟಿರುವುದಾಗಿ ಹೇಳಿದ್ದಾರೆ. ಅಧಿಕಾರಿಗಳು ಶೋಧ ನಡೆಸಿದಾಗ 9 ಲಕ್ಷ ರೂ. ಸಿಕ್ಕಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆದಿತ್ತು.