ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಸಿಸಿಬಿ ಅಧಿಕಾರಿಗಳು ನಡೆಸಿದ್ದು, ಓರ್ವ ಯುವತಿಯನ್ನು ರಕ್ಷಿಸಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ನಗರದಲ್ಲಿನ ಖ್ಯಾತ ಹೋಟೆಲ್ ನಲ್ಲಿಯೇ ಈ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದ್ದು, ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಲಾಗಿದೆ. ಈ ಕುರಿತು ಕಬ್ಬನ್ ಪಾರ್ಕ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ. ಇಲ್ಲಿ ವಿದೇಶದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.