ಗದಗ: ಗದಗದ ಮುಂಡರಗಿ ತಾಲೂಕಿನ ಮುರಡಿ ಪಟ್ಟಣದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಿಓ ಹಾಗೂ ಅಕೌಂಟೆಟ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಮುರಡಿ ಗ್ರಾಮ ಪಂಚಾಯತಿ ಪಿಡಿಓ ಸಿದ್ದಪ್ಪ ಡಂಬಳ, ಅಕೌಂಟೆಂಟ್ ಪ್ರದೀಪ್ ಕದಮ್ 41 ಸಾವಿರ ಲಂಚಕ್ಕೆ ಆಸೆ ಬಿದ್ದು ಪೊಲೀಸರ ಅತಿಥಿಯಾಗಿದ್ದಾರೆ. ಹೌದು ಕಂಪ್ಯೂಟರ್ ಪಹಣಿ ನೀಡಲು 41 ಸಾವಿರ ಬೇಡಿಕೆ ಇಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಹೊಂಚು ಹಾಕಿ ಕಾಯುತ್ತಿದ್ದ ಎಸಿಬಿ ಅಧಿಕಾರಿಗಳು , ಲಂಚ ಸ್ವೀಕರಿಸುವಾಗಲೇ ದಾಳಿ ನಡೆಸಿದ್ದಾರೆ. ಇನ್ನೂ ಎಸಿಬಿ ಡಿವೈಎಸ್ಪಿ ವಾಸುದೇವ ರಾಮ ನೇತೃತ್ವದಲ್ಲಿ ದಾಳಿ ನಡೆದಿದೆ. ಸದ್ಯ ಪಿಡಿಓ ಹಾಗೂ ಅಕೌಂಟೆಂಟ್ ನನ್ನು ಎಸಿಬಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಭಾರತೀಯ ರೈಲ್ವೆ ಗ್ರೂಪ್ ಡಿ ನೇಮಕಾತಿ – 2024: 50,000+ ಹುದ್ದೆಗಳು
SSLC ಹಾಗೂ ITI ಪಾಸಾದವರಿಗೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ. ಭಾರತೀಯ ರೈಲ್ವೆ 50,000 ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಹುದ್ದೆಗಳ ವಿವರಗಳು:...