ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಅವರು ಮತ್ತೊಮ್ಮೆ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಷ್ಟೇ ಸಚಿವರು ನಮಗೆ ಗೌರವ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈಗ ಅಧಿಕಾರಿಗಳು ಮಾತು ಕೇಳುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈಗ ಅಧಿಕಾರಿಗಳ ಸಭೆ ಕರೆಯಲು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಸಭೆ ಕರೆಯಲು ಅವರು ಒತ್ತಾಯಿಸುತ್ತಿದ್ದಾರೆ.
ಹಿರಿಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಅಧೀನ ಕಿರಿಯ ಅಧಿಕಾರಿಗಳ ಮಾತನ್ನೂ ಕೇಳುತ್ತಿಲ್ಲ ಅವರು. ಹೀಗಾಗಿ ಕೆಲಸಗಳು ಆಗದೆ ಕಿರಿಯರು ಅಸಾಹಯಕತೆ ತೋರುತ್ತಿದ್ದಾರೆ. ನನ್ನ ಸೂಚನೆಗೂ ಹಿರಿಯರು ಕ್ಯಾರೇ ಅನ್ನುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜೆಸ್ಕಾಂ ವ್ಯಾಪ್ತಿಯಲ್ಲಿ (GESCOM officials) ಟ್ರಾನ್ಸ್ಫಾರ್ಮರ್ ಅವಳಡಿಕೆಯಾಗುತ್ತಿಲ್ಲ. ಯಲಬುರ್ಗಾ ಕ್ಷೇತ್ರವೊಂದಕ್ಕೆ 200 ಟ್ರಾನ್ಸ್ಫಾರ್ಮರ್ಗಳ ಅಗತ್ಯವಿದೆ. ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ಅವರಿಂದ ಕೆಲಸ ಆಗುತ್ತಿಲ್ಲ. ಇದರಿಂದ ರೈತರ ಜಮೀನಿಗೆ ವಿದ್ಯುತ್ ನೀಡುವುದಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ, ಇದುವರೆಗೆ ಶಾಸಕರ ಪತ್ರಕ್ಕೆ ಸಿಎಂ ಉತ್ತರ ನೀಡಿಲ್ಲ.