ಬೆಂಗಳೂರು: ಚುನಾವಣಾ ಮಹಿಳಾ ಅಧಿಕಾರಿ ಐಷಾರಾಮಿ ಕಾರುಗಳಲ್ಲಿದ್ದ ಹಣವನ್ನು ಸೀಜ್ ಮಾಡಿದ್ದಾರೆ.
ಎರಡು ಕಾರುಗಳ ಗ್ಲಾಸ್ ಒಡೆದು ಕಂತೆ ಕಂತೆ ಹಣ ಸೀಜ್ ಮಾಡಿದ್ದಾರೆ. ಈ ಘಟನೆ ಸಿಲಿಕಾನ್ ಸಿಟಿಯ ಜಯನಗರದಲ್ಲಿ ನಡೆದಿದೆ. ಅಧಿಕಾರಿಗಳು ಬರುತ್ತಿದ್ದಂತೆ ಕಾರಿನಲ್ಲಿದ್ದ ಐವರು, ಚೀಲದಲ್ಲಿರುವುದು ಮಾವಿನ ಹಣ್ಣು ಅಂತಾ ಹೇಳಿದ್ದಾರೆ. ಆ ನಂತರ ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ. ಅಲ್ಲಿಂದ ಐವರೂ ಪಾರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಫೋಲೋ ಕಾರಿನಿಂದ ಬೈಕ್‍ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೂಡಲೇ ಫಾರ್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಈಗ ಕಾರನ್ನು ಅಧಿಕಾರಿಗಳು ವಶಕ್ಕೆ ಪಡಿದ್ದಾರೆ. ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಹೇಳಿದ್ದಾರೆ.
ಹಣ ಸಿಕ್ಕ ಹಿನ್ನೆಲೆಯಲ್ಲಿ ಜನಯಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಸೇರಿದಂತೆ ನಾಯಕರು ಠಾಣೆಗೆ ಜಯನಗರ ಪೊಲೀಸ್ ಠಾಣೆಗೆ (Jayanagar Police) ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್, ಮತ್ತು ಮಾಜಿ ಕಾರ್ಪೋರೇಟರ್ ನಾಗರಾಜ್ ಭೇಟಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.