ಹುಬ್ಬಳ್ಳಿ: ಮನೆಯಲ್ಲಿಟ್ಟಿದ್ದ ದಾಖಲೆ ಇಲ್ಲದ 2 ಕೋಟಿ ರೂ.ಗೂ ಅಧಿಕ ಹಣವನ್ನು ಐಟಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಗ್ರಾಮದ ನಿಂಗಪ್ಪ ಜಟಾದ್ ಎಂಬುವವರ ಮನೆಯ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ದಾಖಲೆ ಇಲ್ಲದ 2 ಕೋಟಿ ರೂ. ಗೂ ಹೆಚ್ಚು ನಗದು ವಶಕ್ಕೆ ಪಡೆದಿದ್ದಾರೆ. ಈ ಹಣವನ್ನು ಚುನಾವಣೆಯಲ್ಲಿ ಮತದಾರರಿಗೆ ಹಂಚುವುದಕ್ಕಾಗಿ ಇಡಲಾಗಿತ್ತು ಎಂದು ತಿಳಿದು ಬಂದಿದೆ.
ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಅಪಾರ ಪ್ರಮಾಣದ ಮದ್ಯವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.