ಒಲಂಪಿಕ್ಸ್ ಎಫೆಕ್ಟ್ – ಟೋಕಿಯೊದಲ್ಲಿ ದಾಖಲೆಯ 2,848 ಕೊರೊನಾ ಕೇಸ್ ಪತ್ತೆ..!
ಟೋಕಿಯೊ: ಜಪಾನ್ ಟಕಿಯೋದಲ್ಲಿ ಆಯೋಜನೆಗೊಂಡಿರುವ ಒಲಂಪಿಕ್ಸ್ ನ ಪರಿಣಾಮದಿಂದಾಗಿ ಟೋಕಿಯೊದಲ್ಲಿ ಅತಿ ಹೆಚ್ಚು ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿರೋದಾಗಿ ವರದಿಯಾಗಿದೆ. ಟೋಕಿಯೋದಲ್ಲಿ ಕಳೆದ 24 ಗಂಟೆಯಲ್ಲಿ 2,848 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದು ಜನವರಿ 7ರಂದು ವರದಿಯಾಗಿದ್ದ 2,520 ಪ್ರಕರಣಗಳ ಹಿಂದಿನ ದಾಖಲೆಯನ್ನು ಮೀರಿಸಿದೆ ಎನ್ನಲಾಗಿದೆ.
ಒಲಿಂಪಿಕ್ಸ್ ಸಮಯದಲ್ಲಿ ಹೆಚ್ಚು ಸಾಂಕ್ರಾಮಿಕ ಡೆಲ್ಟಾ ರೂಪಾಂತರವು ಉಲ್ಬಣಕ್ಕೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದರು. ಲಸಿಕೆ ಪೂರೈಕೆ ಅನಿಶ್ಚಿತತೆಯಿಂದಾಗಿ ಜಪಾನ್‌ನ ಇನಾಕ್ಯುಲೇಷನ್ ಡ್ರೈವ್ ವೇಗ ಕಳೆದುಕೊಳ್ಳುವುದರಿಂದ ಪ್ರಕರಣಗಳು ತೀವ್ರವಾಗಿ ಹೆಚ್ಚಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಒಟ್ಟಾರೆ 870,445 ಪ್ರಕರಣಗಳು ಮತ್ತು 15,129 ಸಾವುಗಳು ವರದಿಯಾಗಿವೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ..
ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








