ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ – 2028 ರ ಒಲಂಪಿಕ್ಸ್ ನಲ್ಲಿ ಕ್ರಿಕೆಟ್ ..!
ಎಷ್ಟೋ ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಘಳಿಗೆ 2028ರಲ್ಲಿ ಕೂಡಿಬರುತ್ತಿದ್ದು, 2028ರಲ್ಲಿ ಲಾಸ್ ಎಂಜಲೀಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಲು ಬಿಡ್ ಮಾಡಿರೋದಾಗಿ ಐಸಿಸಿ ಹೇಳಿದೆ. ಐಸಿಸಿ ಈಗಾಗಲೇ ವರ್ಕಿಂಗ್ ಗ್ರೂಪ್ನ್ನು ರಚನೆ ಮಾಡಿದೆ. ಈ ಮೂಲಕ ಕ್ರಿಕೆಟ್ ಪ್ರಿಯರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ..
ಇನ್ನೂ 2028ರ ಲಾಸ್ ಏಂಜಲೀಸ್ ಒಲಂಪಿಕ್ ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಿದಲ್ಲಿ ಟೀಂ ಇಂಡಿಯಾ ಕೂಡ ಸ್ಪರ್ಧೆಗೆ ಇಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಹೇಳಿದ್ರು. ಈ ಮೊದಲು ಬಿಸಿಸಿಐ ಒಲಂಪಿಕ್ನಲ್ಲಿ ಸೇರ್ಪಡೆಯಾಗಲು ಮನಸ್ಸು ಮಾಡಿರಲಿಲ್ಲ. ಆದರೆ ಜಯ್ ಶಾ ಅಧಿಕಾರ ವಹಿಸಿಕೊಂಡಾಗಿನಿಂದ ಈ ನಿಲುವು ಬದಲಾಗಿದೆ.

1900ರಲ್ಲಿ ನಡೆದ ಒಲಂಪಿಕ್ ಪಂದ್ಯಾವಳಿಯಲ್ಲಿ ಮಾತ್ರ ಕ್ರಿಕೆಟ್ ಆಟವನ್ನು ಸೇರ್ಪಡೆ ಮಾಡಲಾಗಿತ್ತು. ಇದರಲ್ಲಿ ಗ್ರೇಟ್ ಬ್ರಿಟನ್ ಚಿನ್ನದ ಪದಕವನ್ನು ತನ್ನದಾಗಿಸಸಿಕೊಂಡಿತ್ತು. “ಈ ಬಿಡ್ನ ಹಿಂದೆ ನಮ್ಮ ಕ್ರೀಡೆಯು ಒಂದುಗೂಡಿದೆ” ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು. ಅಲ್ಲದೇ ನಾವು ಒಲಿಂಪಿಕ್ಸ್ ಅನ್ನು ಕ್ರಿಕೆಟ್ನ ದೀರ್ಘಾವಧಿಯ ಭವಿಷ್ಯದ ಭಾಗವಾಗಿ ನೋಡುತ್ತೇವೆ. ನಮಗೆ ಜಾಗತಿಕವಾಗಿ ಒಂದು ಶತಕೋಟಿಗೂ ಹೆಚ್ಚು ಅಭಿಮಾನಿಗಳಿದ್ದಾರೆ ಮತ್ತು ಸುಮಾರು 90 ಪ್ರತಿಶತ ಅವರಲ್ಲಿ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ನೋಡಲು ಬಯಸುತ್ತಾರೆ ಎಂದಿದ್ದಾರೆ.
ಕ್ರಿಕೆಟ್ ಅಭಿಮಾನಿಗಳ ಜೊತೆಗೆ ಅವಿನಾಭಾವ ಸಂಬಂಧ ಹೊಂದಿದೆ.. ಕ್ರಿಕೆಟ್ ಭಾವನಾತ್ಮಕ ಅಭಿಮಾನಿಗಳನ್ನು ಹೊಂದಿದೆ. ವಿಶೇಷವಾಗಿ ದಕ್ಷಿಣ ಏಷ್ಯಾದಲ್ಲಿ ಶೇ 92 % ಜನ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ಇಯಾನ್ ವಾಟ್ಮೋರ್ ಐಸಿಸಿ ಒಲಂಪಿಕ್ ವರ್ಕಿಂಗ್ ಗ್ರೂಪ್ನ್ನು ಮುನ್ನಡೆಸಲಿದ್ದಾರೆ. ಐಸಿಸಿ ಸ್ವತಂತ್ರ ನಿರ್ದೇಶಕ ಇಂದ್ರ ನೂಯಿ, ಜಿಂಬಾಬ್ವೆ ಕ್ರಿಕೆಟ್ ಮುಖ್ಯಸ್ಥ ತವೆಂಗ್ವಾ ಮುಕುಹ್ಲಾನಿ, ಐಸಿಸಿ ಅಸೋಸಿಯೇಟ್ ಸದಸ್ಯ ನಿರ್ದೇಶಕ ಮಹಿಂದಾ ವಲ್ಲಿಪುರಂ ಈ ಗ್ರೂಪ್ನಲ್ಲಿ ಇದ್ದಾರೆ.
ಅಮೆರಿಕದಲ್ಲಿ 30 ಮಿಲಿಯನ್ ಕ್ರಿಕೆಟ್ ಅಭಿಮಾನಿಗಳಿದ್ದಾರೆ. ಇವರೆಲ್ಲರೂ ಒಲಂಪಿಕ್ ನಲ್ಲಿ ಕ್ರಿಕೆಟ್ನ್ನು ನೋಡಬಯಸುತ್ತಾರೆ ಎಂದು ಹೇಳಿದ್ದಾರೆ. ಒಲಂಪಿಕ್ ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡುವುದು ಉತ್ತಮ ನಿರ್ಧಾರವಾಗಿದೆ ಎಂದು ನಾವು ನಂಬಿದ್ದೇವೆ. ಆದರೆ ಇದೇ ರೀತಿ ಅನೇಕ ಕ್ರೀಡೆಗಳು ಸಹ ಇದೇ ಬಯಕೆಯನ್ನು ಹೊಂದಿರೋದ್ರಿಂದ ಈ ದಾರಿ ಸುಲಭವಾದುದಲ್ಲ ಎಂಬುದು ನಮಗೂ ತಿಳಿದಿದೆ. ಆದರೆ ಕ್ರಿಕೆಟ್ನ್ನು ಒಲಂಪಿಕ್ ಗೆ ಸೇರ್ಪಡೆ ಮಾಡುವ ಪ್ರಯತ್ನಕ್ಕೆ ಮುನ್ನಡಿ ಇಡಲು ಇದು ಸೂಕ್ತ ಸಮಯವಾಗಿದೆ ಎಂದು ನಾವು ನಂಬಿದ್ದೇವೆ ಎಂದು ಗ್ರೇಗ್ ಬಾರ್ಕ್ಲಿ ಹೇಳಿದ್ದಾರೆ.








